Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ರಾಜಸ್ಥಾನದ ಜೈಪುರ-ಅಜ್ಮೀರ್ ಹೆದ್ದಾರಿಯಲ್ಲಿ ಸಂಭವಿಸಿದ ಅಪಘಾತದ ಬಗ್ಗೆ ಪ್ರಧಾನಮಂತ್ರಿ ಶೋಕ, ಪರಿಹಾರ ಘೋಷಣೆ


ರಾಜಸ್ಥಾನದ ಜೈಪುರ-ಅಜ್ಮೀರ್ ಹೆದ್ದಾರಿಯಲ್ಲಿ ಸಂಭವಿಸಿದ ಅಪಘಾತದ ಬಗ್ಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಂತಾಪ ವ್ಯಕ್ತಪಡಿಸಿದ್ದಾರೆ.  ಅಪಘಾತದಲ್ಲಿ ಮೃತಪಟ್ಟವರ ವಾರಸುದಾರರಿಗೆ ಪಿ ಎಂ ಎನ್ ಆರ್ ಎಫ್ ನಿಂದ ತಲಾ ಎರಡು ಲಕ್ಷ ರೂಪಾಯಿ ಹಾಗೂ ಗಾಯಗೊಂಡವರಿಗೆ ತಲಾ  ರೂ.  50,000 ಪರಿಹಾರವನ್ನು ಶ್ರೀ ಮೋದಿ ಅವರು ಪ್ರಕಟಿಸಿದ್ದಾರೆ.

ಪ್ರಧಾನಮಂತ್ರಿಗಳ ಕಾರ್ಯಾಲಯ ಎಕ್ಸ್ ನಲ್ಲಿ ಮಾಡಿರುವ ಪೋಸ್ಟ್ ಹೀಗಿದೆ: 

“ರಾಜಸ್ಥಾನದ ಜೈಪುರ-ಅಜ್ಮೀರ್ ಹೆದ್ದಾರಿಯಲ್ಲಿ ಸಂಭವಿಸಿದ ಅಪಘಾತದಲ್ಲಿ ಜೀವಹಾನಿಯಿಂದ ತೀವ್ರ ದುಃಖವಾಗಿದೆ.  ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪಗಳು.  ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ.  ಸಂತ್ರಸ್ತರಿಗೆ ಸ್ಥಳೀಯ ಆಡಳಿತ ನೆರವು ನೀಡುತ್ತಿದೆ.  ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿ (ಪಿಎಂಎನ್ಆರ್ಎಫ್) ನಿಂದ ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂಪಾಯಿ ಹಾಗೂ  ಗಾಯಾಳುಗಳಿಗೆ ತಲಾ ರೂ. 50,000 ಪರಿಹಾರ ನೀಡಲಾಗುವುದು. @narendramodi

 

 

*****