ಇಂದು ನಿಧನ ಹೊಂದಿದ ರಾಮಜನ್ಮಭೂಮಿ ದೇವಸ್ಥಾನದ ಪ್ರಧಾನ ಅರ್ಚಕ ಮಹಂತ್ ಸತ್ಯೇಂದ್ರ ದಾಸ್ ಅವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ. ತಮ್ಮ ಇಡೀ ಜೀವನವನ್ನು ಭಗವಾನ್ ಶ್ರೀರಾಮನ ಸೇವೆಗೆ ಮುಡಿಪಾಗಿಟ್ಟಿದ್ದ ಮಹಂತ್ ಅವರು ಧಾರ್ಮಿಕ ಆಚರಣೆಗಳು ಮತ್ತು ಧರ್ಮಗ್ರಂಥಗಳಲ್ಲಿ ಪರಿಣಿತರಾಗಿದ್ದರು ಎಂದು ಶ್ರೀ ಮೋದಿಯವರು ಸ್ಮರಿಸಿಕೊಂಡಿದ್ದಾರೆ.
ತಮ್ಮ ಎಕ್ಸ್ ಪೋಸ್ಟ್ ನಲ್ಲಿ;
“ಶ್ರೀರಾಮ ಜನ್ಮಭೂಮಿ ದೇವಾಲಯದ ಪ್ರಧಾನ ಅರ್ಚಕರಾದ ಮಹಂತ್ ಸತ್ಯೇಂದ್ರ ದಾಸ್ ಅವರ ನಿಧನ ವಾರ್ತೆ ಕೇಳಿ ತೀವ್ರ ದುಃಖವಾಗಿದೆ. ಧಾರ್ಮಿಕ ಆಚರಣೆಗಳು ಮತ್ತು ಧರ್ಮಗ್ರಂಥಗಳಲ್ಲಿ ಪಾರಂಗತರಾಗಿದ್ದ ಮಹಂತ್ ಅವರು ತಮ್ಮ ಇಡೀ ಜೀವನವನ್ನು ಭಗವಾನ್ ಶ್ರೀ ರಾಮನ ಸೇವೆಗೆ ಮುಡಿಪಾಗಿಟ್ಟಿದ್ದರು. ದೇಶದ ಆಧ್ಯಾತ್ಮಿಕ ಮತ್ತು ಸಾಮಾಜಿಕ ಜೀವನಕ್ಕೆ ಅವರ ಅಮೂಲ್ಯ ಕೊಡುಗೆಯನ್ನು ಸದಾ ಭಕ್ತಿಯಿಂದ ಸ್ಮರಿಸಲಾಗುತ್ತದೆ. ಈ ದುಃಖದ ಸಮಯದಲ್ಲಿ ಅವರ ಕುಟುಂಬಸ್ಥರು ಮತ್ತು ಅನುಯಾಯಿಗಳಿಗೆ ದೇವರು ಶಕ್ತಿ ನೀಡಲಿ ಎಂದು ನಾನು ಪ್ರಾರ್ಥಿಸುತ್ತೇನೆ. ಓಂ ಶಾಂತಿ!” ಎಂದು ಬರೆದುಕೊಂಡಿದ್ದಾರೆ.
*****
राम जन्मभूमि मंदिर के मुख्य पुजारी महंत सत्येंद्र दास जी के देहावसान से अत्यंत दुख हुआ है। धार्मिक अनुष्ठानों और शास्त्रों के ज्ञाता रहे महंत जी का पूरा जीवन भगवान श्री राम की सेवा में समर्पित रहा। देश के आध्यात्मिक और सामाजिक जीवन में उनके अमूल्य योगदान को हमेशा श्रद्धापूर्वक… pic.twitter.com/eWMVeZnRLQ
— Narendra Modi (@narendramodi) February 12, 2025