Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ರಾಷ್ಟ್ರೀಯ ವಿಜ್ಞಾನ ದಿನದ ಅಂಗವಾಗಿ ಪ್ರಧಾನಮಂತ್ರಿ ಶುಭಾಶಯ


ಇಂದು ಫೆಬ್ರವರಿ 28, ರಾಷ್ಟ್ರೀಯ ವಿಜ್ಞಾನ ದಿನದ ಅಂಗವಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದೇಶದ ಜನತೆಗೆ ಶುಭಾಶಯ ತಿಳಿಸಿದ್ದಾರೆ.

ಎಕ್ಸ್ ಪೋಸ್ಟ್ ನಲ್ಲಿ ಬರೆದುಕೊಂಡಿರುವ ಅವರು,

“ವಿಜ್ಞಾನದ ಬಗ್ಗೆ ಆಸಕ್ತಿ ಹೊಂದಿರುವವರಿಗೆ, ವಿಶೇಷವಾಗಿ ನಮ್ಮ ಯುವ ನವೋದ್ಯಮಿಗಳಿಗೆ ರಾಷ್ಟ್ರೀಯ ವಿಜ್ಞಾನ ದಿನದ ಶುಭಾಶಯಗಳು. ವಿಜ್ಞಾನ ಮತ್ತು ನಾವೀನ್ಯತೆಯನ್ನು ಜನಪ್ರಿಯಗೊಳಿಸುತ್ತಿರೋಣ ಹಾಗೂ ವಿಕಸಿತ ಭಾರತವನ್ನು ನಿರ್ಮಿಸಲು ವಿಜ್ಞಾನವನ್ನು ಬಳಸಿಕೊಳ್ಳೋಣ.

ಈ ತಿಂಗಳ #MannKiBaat ಕಾರ್ಯಕ್ರಮದಲ್ಲಿ, ಯುವಕರು ಒಂದಲ್ಲ ಒಂದು ವೈಜ್ಞಾನಿಕ ಚಟುವಟಿಕೆಯಲ್ಲಿ ಭಾಗವಹಿಸುವ ‘ವಿಜ್ಞಾನಿಯಾಗಿ ಒಂದು ದಿನ’ ಬಗ್ಗೆ ಮಾತನಾಡಿದ್ದೆವು” ಎಂದು ತಿಳಿಸಿದ್ದಾರೆ.

 

 

*****