Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ರಾಷ್ಟ್ರೀಯ ಹೆಣ್ಣು ಮಕ್ಕಳ ದಿನವಾದ ಇಂದು, ಹೆಣ್ಣು ಮಗುವನ್ನು ಸಬಲೀಕರಣಗೊಳಿಸಿ, ಆಕೆಗೆ ವ್ಯಾಪಕವಾದ ಅವಕಾಶಗಳನ್ನು ನೀಡುವ ನಮ್ಮ ಬದ್ಧತೆಯನ್ನು ನಾವು ಪುನರುಚ್ಚರಿಸುತ್ತೇವೆ: ಪ್ರಧಾನಮಂತ್ರಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ರಾಷ್ಟ್ರೀಯ ಹೆಣ್ಣು ಮಕ್ಕಳ ದಿನವಾದ ಇಂದು, ಹೆಣ್ಣು ಮಗುವನ್ನು ಸಬಲೀಕರಣಗೊಳಿಸಿ, ಆಕೆಗೆ ವಿಸ್ತೃತ ಶ್ರೇಣಿಯ ಅವಕಾಶಗಳನ್ನು ನೀಡುವ ಸರ್ಕಾರದ ಬದ್ಧತೆಯನ್ನು ಪುನರುಚ್ಚರಿಸಿದ್ದಾರೆ.

Xನ ಒಂದು ಥ್ರೆಡ್ ಪೋಸ್ಟ್ ನಲ್ಲಿ ಶ್ರೀ ಮೋದಿಯವರು:

“ರಾಷ್ಟ್ರೀಯ ಹೆಣ್ಣು ಮಕ್ಕಳ ದಿನವಾದ ಇಂದು, ಹೆಣ್ಣು ಮಗುವನ್ನು ಸಬಲೀಕರಣಗೊಳಿಸಿ, ಆಕೆಗೆ ವ್ಯಾಪಕವಾದ ಅವಕಾಶಗಳನ್ನು ನೀಡುವ ನಮ್ಮ ಬದ್ಧತೆಯನ್ನು ನಾವು ಪುನರುಚ್ಚರಿಸುತ್ತೇವೆ. ಎಲ್ಲಾ ಕ್ಷೇತ್ರಗಳಲ್ಲಿ ಹೆಣ್ಣು ಮಕ್ಕಳ ಸಾಧನೆಗಳ ಬಗ್ಗೆ ಭಾರತ ಹೆಮ್ಮೆಪಡುತ್ತದೆ. ಅವರ ಸಾಧನೆಗಳು ನಮ್ಮೆಲ್ಲರಿಗೂ ಸ್ಫೂರ್ತಿ ನೀಡುತ್ತವೆ.”

“ನಮ್ಮ ಸರ್ಕಾರವು ಹೆಣ್ಣು ಮಗುವಿನ ಸಬಲೀಕರಣಕ್ಕೆ ಕೊಡುಗೆ ನೀಡಿದ ಶಿಕ್ಷಣ, ತಂತ್ರಜ್ಞಾನ, ಕೌಶಲ್ಯ, ಆರೋಗ್ಯ ರಕ್ಷಣೆ ಮುಂತಾದ ಕ್ಷೇತ್ರಗಳತ್ತ ಗಮನ ಹರಿಸಿದೆ. ಹೆಣ್ಣು ಮಗುವಿನ ವಿರುದ್ಧ ಯಾವುದೇ ತಾರತಮ್ಯ ನಡೆಯದಂತೆ ನೋಡಿಕೊಳ್ಳುವಲ್ಲಿ ನಾವು ಅಷ್ಟೇ ದೃಢನಿಶ್ಚಯವನ್ನು ಹೊಂದಿದ್ದೇವೆ” ಎಂದು ಟ್ವೀಟ್ ಮಾಡಿದ್ದಾರೆ.

 

 

*****