Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ವಿಶ್ವದ ಅತಿ ಕಿರಿಯ ಚೆಸ್ ಚಾಂಪಿಯನ್ ಗುಕೇಶ್ ಡಿ ಅವರಿಗೆ ಪ್ರಧಾನಮಂತ್ರಿ ಅಭಿನಂದನೆ 


ಅತಿ ಕಿರಿಯ ವಿಶ್ವ ಚೆಸ್ ಚಾಂಪಿಯನ್ ಆಗಿ ಹೊರಹೊಮ್ಮಿರುವ ಗುಕೇಶ್ ಡಿ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಭಿನಂದಿಸಿದ್ದಾರೆ. ಗುಕೇಶ್ ಅವರ ಸಾಧನೆ ಐತಿಹಾಸಿಕ ಮತ್ತು ಮಾದರಿ ಎಂದು ಪ್ರಧಾನಿ ಶ್ಲಾಘಿಸಿದ್ದಾರೆ.

ಅಂತಾರಾಷ್ಟ್ರೀಯ ಚೆಸ್‌ ಒಕ್ಕೂಟದ ಪೋಸ್ಟ್‌ ಗೆ ಎಕ್ಸ್‌ ನಲ್ಲಿ ಪ್ರತಿಕ್ರಿಯೆ ನೀಡಿರುವ ಶ್ರೀ ಮೋದಿ ಅವರು ಹೀಗೆ ಹೇಳಿದ್ದಾರೆ:

“ಐತಿಹಾಸಿಕ ಮತ್ತು ಅನುಕರಣೀಯ!

ಅತ್ಯದ್ಭುತ ಸಾಧನೆಗೆ ಗುಕೇಶ್ ಡಿ ಅವರಿಗೆ ಅಭಿನಂದನೆಗಳು. ಇದು ಅವರ ಅನನ್ಯ ಪ್ರತಿಭೆ, ಕಠಿಣ ಪರಿಶ್ರಮ ಮತ್ತು ಅಚಲ ಬದ್ಧತೆಯ ಫಲವಾಗಿದೆ.

ಈ ಗೆಲುವು ಚೆಸ್ ವಾರ್ಷಿಕಗಳ ಇತಿಹಾಸದಲ್ಲಿ ಅವರ ಹೆಸರನ್ನು ದಾಖಲು ಮಾಡಿದೆ ಮಾತ್ರವಲ್ಲದೆ ಲಕ್ಷಾಂತರ ಯುವ ಮನಸ್ಸುಗಳು ದೊಡ್ಡ ಕನಸು ಕಾಣಲು ಮತ್ತು ಶ್ರೇಷ್ಠ ಕೌಶಲ್ಯಗಳನ್ನು ಹೊಂದಲು ಪ್ರೇರೇಪಿಸಿದೆ.

@DGukesh ಅವರ ಮುಂದಿನ ಪ್ರಯತ್ನಗಳಿಗೆ ನನ್ನ ಶುಭ ಹಾರೈಕೆಗಳು”.

*****