Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ವಿಶ್ವಸಂಸ್ಥೆಯ ಸಾಮಾನ್ಯ ಸಭೆಯು ಹುತಾತ್ಮರಾದ ಭಾರತದ ಯೋಧರಿಗೆ ಹೊಸ ಸ್ಮಾರಕ ಗೋಡೆಯನ್ನು ಸ್ಥಾಪಿಸುವ ನಿರ್ಣಯವನ್ನು ಅಂಗೀಕರಿಸಿತು.


ವಿಶ್ವಸಂಸ್ಥೆಯ ಸಾಮಾನ್ಯ ಸಭೆಯು ಹುತಾತ್ಮರಾದ ಭಾರತದ ಯೋಧರಿಗೆ ಹೊಸ ಸ್ಮಾರಕ ಗೋಡೆಯನ್ನು ಸ್ಥಾಪಿಸುವ ನಿರ್ಣಯವನ್ನು ಅಂಗೀಕರಿಸಿದ್ದಕ್ಕಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಸಂತಸ ವ್ಯಕ್ತಪಡಿಸಿದ್ದಾರೆ.

ಪ್ರಧಾನಮಂತ್ರಿಯವರ ಟ್ವೀಟ್ ಹೀಗಿದೆ:

“ಶಾಂತಿ ರಕ್ಷಣೆಗಾಗಿ ಹುತಾತ್ಮರಾದ ಯೋಧರ ಗೌರವಾರ್ಥವಾಗಿ ಹೊಸ ಸ್ಮಾರಕ ಗೋಡೆಯನ್ನು ನಿರ್ಮಿಸಲು ಭಾರತವು ಪ್ರಸ್ತಾಪಿಸಿದ ನಿರ್ಣಯವನ್ನು ವಿಶ್ವಸಂಸ್ಥೆಯ ಸಾಮಾನ್ಯ ಸಭೆ ಅನುಮೋದಿಸಿರುವುದು ಸಂತೋಷ ತಂದಿದೆ. ಈ ನಿರ್ಣಯದ ಪರವಾಗಿ ದಾಖಲೆಯ 190 ಸಹ ಪ್ರಾಯೋಜಕತ್ವಗಳು ಸಿಕ್ಕವು.  ಬೆಂಬಲಕ್ಕಾಗಿ ಎಲ್ಲರಿಗೂ ಧನ್ಯವಾದಗಳು.”

*******