Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ವಿಶ್ವ ಆರೋಗ್ಯ ದಿನದಂದು ಆರೋಗ್ಯಕರ ಜಗತ್ತನ್ನು ನಿರ್ಮಿಸುವ ಬದ್ಧತೆ ಪ್ರಧಾನಮಂತ್ರಿಗಳಿಂದ ಪುನರುಚ್ಚಾರ


ಆರೋಗ್ಯಕರ ಜಗತ್ತನ್ನು ನಿರ್ಮಿಸುವ ಬದ್ಧತೆಯನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಶ್ವ ಆರೋಗ್ಯ ದಿನದಂದು ಪುನರುಚ್ಚರಿಸಿದ್ದಾರೆ. ಸರ್ಕಾರವು ಜನರ ಆರೋಗ್ಯ ರಕ್ಷಣೆಯತ್ತ ಗಮನ ಹರಿಸುತ್ತದೆ ಮತ್ತು ಜನರ ಯೋಗಕ್ಷೇಮಕ್ಕಾಗಿ ಅಗತ್ಯವಿರುವ ಸೌಲಭ್ಯಗಳನ್ನು ಒದಗಿಸುವತ್ತ ಕಾರ್ಯನಿರ್ವಹಿಸಲಿದೆ ಎಂದು ಶ್ರೀ ಮೋದಿ ಅವರು ಹೇಳಿದ್ದಾರೆ. ಉತ್ತಮ ಆರೋಗ್ಯವೇ ಪ್ರತಿ ಅಭಿವೃದ್ಧಿಶೀಲ ಸಮಾಜದ ಅಡಿಪಾಯವಾಗಿದೆ ಎಂದು ಅವರು ಹೇಳಿದ್ದಾರೆ.

ಪ್ರಧಾನಮಂತ್ರಿಗಳು ಎಕ್ಸ್ ನಲ್ಲಿ ಹೀಗೆ ಬರೆದಿದ್ದಾರೆ:

“ವಿಶ್ವ ಆರೋಗ್ಯ ದಿನದಂದು, ಆರೋಗ್ಯಕರ ಜಗತ್ತನ್ನು ನಿರ್ಮಿಸುವ ನಮ್ಮ ಬದ್ಧತೆಯನ್ನು ಪುನರುಚ್ಚರಿಸೋಣ. ನಮ್ಮ ಸರ್ಕಾರವು ಆರೋಗ್ಯ ರಕ್ಷಣೆಗೆ ಆದ್ಯತೆ ನೀಡುತ್ತಾ ಜನರ ಯೋಗಕ್ಷೇಮದ ವಿವಿಧ ಅಂಶಗಳಿಗೆ ಸಂಬಂಧಿಸಿದಂತೆ ಬದ್ಧವಾಗಿ ಕಾರ್ಯನಿರ್ವಹಿಸಲಿದೆ. ಅಭಿವೃದ್ಧಿ ಹೊಂದುತ್ತಿರುವ ಪ್ರತಿ ಸಮಾಜಕ್ಕೆ ಉತ್ತಮ ಆರೋಗ್ಯವೇ ಬುನಾದಿಯಾಗಿದೆ!”

 

 

*****