Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

`ವಿಶ್ವ ವನ್ಯಜೀವಿ ದಿನ’ದಂದು ವನ್ಯಜೀವಿ ಸಂರಕ್ಷಕರು ಮತ್ತು ವನ್ಯಜೀವಿ ಪ್ರಿಯರಿಗೆ ಶುಭ ಕೋರಿದ ಪ್ರಧಾನಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ʻವಿಶ್ವ ವನ್ಯಜೀವಿ ದಿನʼದ ಸಂದರ್ಭದಲ್ಲಿ ವನ್ಯಜೀವಿ ಸಂರಕ್ಷಕರು ಮತ್ತು ವನ್ಯಜೀವಿ ಪ್ರಿಯರಿಗೆ ಶುಭ ಕೋರಿದ್ದಾರೆ.

ಈ ಕುರಿತು ಪ್ರಧಾನಿ ಹೀಗೆ ಟ್ವೀಟ್ ಮಾಡಿದ್ದಾರೆ: 

“ವಿಶ್ವ ವನ್ಯಜೀವಿ ದಿನದಂದು, ವನ್ಯಜೀವಿ ಪ್ರಿಯರಿಗೆ ಮತ್ತು ವನ್ಯಜೀವಿ ಸಂರಕ್ಷಣೆಗಾಗಿ ಕೆಲಸ ಮಾಡುವವರಿಗೆ ಶುಭಾಶಯಗಳು. ಪ್ರಾಣಿಗಳ ಆವಾಸಸ್ಥಾನಗಳನ್ನು ರಕ್ಷಿಸುವುದು ನಮ್ಮ ಪ್ರಮುಖ ಆದ್ಯತೆಯಾಗಿದೆ. ಈ ವಿಚಾರದಲ್ಲಿ ನಾವು ಉತ್ತಮ ಫಲಿತಾಂಶಗಳನ್ನು ಕಂಡಿದ್ದೇವೆ. ಕಳೆದ ವರ್ಷವು ನಾವು ನಮ್ಮ ದೇಶಕ್ಕೆ ಚೀತಾಗಳನ್ನು ಸ್ವಾಗತಿಸಿದ ವರ್ಷವಾಗಿ ಸದಾ ನೆನಪಿನಲ್ಲಿ ಉಳಿಯಲಿದೆ.

 

 

***