Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಶಿಕ್ಷಕರ ದಿನದಂದು ಶಿಕ್ಷಕ ಸಮುದಾಯಕ್ಕೆ ಪ್ರಧಾನಮಂತ್ರಿ ಶುಭಾಶಯ ಕೋರಿದರು; ಮಾಜಿ ರಾಷ್ಟ್ರಪತಿ ಡಾ. ಸರ್ವಪಳ್ಳಿ ರಾಧಾಕೃಷ್ಣರವರ ಜನ್ಮ ದಿನದಂದು ಅವರಿಗೆ ಗೌರವ ನಮನ ಸಲ್ಲಿಸಿದರು


ಶಿಕ್ಷಕರ ದಿನದಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶಿಕ್ಷಕ ಸಮುದಾಯಕ್ಕೆ ಶುಭಾಶಯ ಕೋರಿದರು. ಮಾಜಿ ರಾಷ್ಟ್ರಪತಿ ಡಾ. ಸರ್ವಪಳ್ಳಿ ರಾಧಾಕೃಷ್ಣರವರ ಜನ್ಮ ದಿನದಂದು ಅವರಿಗೂ ಗೌರವ ನಮನ ಸಲ್ಲಿಸಿದರು.

” ವಿಶೇಷ ಶಿಕ್ಷಕರ ದಿನದಂದು ಶಿಕ್ಷಕ ಸಮುದಾಯಕ್ಕೆ ಶುಭಾಶಯಗಳು. ಯುವ ಜನತೆಯನ್ನು ರೂಪಿಸುವಲ್ಲಿ ಮತ್ತು ನಮ್ಮ ರಾಷ್ಟ್ರ ನಿರ್ಮಾಣದಲ್ಲಿ ಶಿಕ್ಷಕರು ಅನನ್ಯ ಪಾತ್ರವಹಿಸುತ್ತಾರೆ.

ನಾವು ಮಾಜಿ ರಾಷ್ಟ್ರಪತಿ ಮತ್ತು ಸ್ವತಃ ಪ್ರಸಿದ್ಧ ಶಿಕ್ಷಕರಾಗಿದ್ದ ಡಾ. ಸರ್ವಪಳ್ಳಿ ರಾಧಾಕೃಷ್ಣರವರಿಗೆ ಅವರ ಜನ್ಮ ದಿನದಂದು ತಲೆಬಾಗುತ್ತಿದ್ದೇವೆ . ” ಎಂದು ಪ್ರಧಾನಮಂತ್ರಿ ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ.