Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಶಿಕ್ಷಕರ ದಿನದ ಅಂಗವಾಗಿ ಶಿಕ್ಷಕರ ಸಮುದಾಯಕ್ಕೆ ಪ್ರಧಾನಿ ಶುಭಾಶಯ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶಿಕ್ಷಕರ ದಿನಾಚರಣೆಯ ಸಂದರ್ಭದಲ್ಲಿ ಶಿಕ್ಷಕರ ಸಮುದಾಯಕ್ಕೆ ಶುಭ ಕೋರಿದ್ದಾರೆ. ಮಾಜಿ ರಾಷ್ಟ್ರಪತಿ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜಯಂತಿಯಂದು ಪ್ರಧಾನಮಂತ್ರಿಯವರು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.

ಬಗ್ಗೆ ಪ್ರಧಾನಿ ಹೀಗೆ ಸರಣಿ ಟ್ವೀಟ್ ಮಾಡಿದ್ದಾರೆ: “ಶಿಕ್ಷಕರ ದಿನದಂದು, ಯುವ ಮನಸ್ಸುಗಳನ್ನು ಪೋಷಿಸುವಲ್ಲಿ ಸದಾ ಪ್ರಮುಖ ಪಾತ್ರ ವಹಿಸಿರುವ ಇಡೀ ಬೋಧಕ ಸಮುದಾಯಕ್ಕೆ ಶುಭಾಶಯಗಳು. ಕೋವಿಡ್-19 ಸಮಯದಲ್ಲೂ ವಿದ್ಯಾರ್ಥಿಗಳ ಶೈಕ್ಷಣಿಕ ಪಯಣವನ್ನು ಶಿಕ್ಷಕರು ಆವಿಷ್ಕರಿಸಿದ ಮತ್ತು ಮುಂದುವರಿಸಿದ ಬಗೆ ಪ್ರಶಂಸನೀಯ.

ಡಾ. ಎಸ್. ರಾಧಾಕೃಷ್ಣನ್ ಅವರ ಜಯಂತಿಯಂದು ನಾನು ಅವರಿಗೆ ಗೌರವ ಸಲ್ಲಿಸುತ್ತೇನೆ ಮತ್ತು ಅವರ ವಿಶಿಷ್ಟ ಪಾಂಡಿತ್ಯ ಮತ್ತು ನಮ್ಮ ದೇಶಕ್ಕೆ ನೀಡಿದ ಕೊಡುಗೆಗಳನ್ನು ಸ್ಮರಿಸುತ್ತೇನೆ.”

***