Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಶಿವಮೊಗ್ಗ ವಿಮಾನ ನಿಲ್ದಾಣದಿಂದ ವಾಣಿಜ್ಯ, ಸಂಪರ್ಕ ಮತ್ತು ಪ್ರವಾಸೋದ್ಯಮ ಹೆಚ್ಚಳ: ಪ್ರಧಾನ ಮಂತ್ರಿ


ಕರ್ನಾಟಕದ ಶಿವಮೊಗ್ಗದಲ್ಲಿ ಆರಂಭವಾಗಲಿರುವ ಹೊಸ ವಿಮಾನ ನಿಲ್ದಾಣದಿಂದ  ವಾಣಿಜ್ಯ, ಸಂಪರ್ಕ ಮತ್ತು ಪ್ರವಾಸೋದ್ಯಮ ಅಭಿವೃದ್ಧಿ ಕಾಣಲಿದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ. ಶಿವಮೊಗ್ಗ ಕ್ಷೇತ್ರದ ಸಂಸದ ಶ್ರೀ ಬಿ ವೈ ರಾಘವೇಂದ್ರ ಅವರು, ಶಿವಮೊಗ್ಗದಲ್ಲಿ ವಿಮಾನ ನಿಲ್ದಾಣದ ಕನಸು ನನಸಾಗುತ್ತಿದೆ. ಶಿವಮೊಗ್ಗ ವಿಮಾನ ನಿಲ್ದಾಣವು ಕೇವಲ ವಿಮಾನ ನಿಲ್ದಾಣವಾಗದೆ, ಮಲೆನಾಡು ಪ್ರದೇಶದ ಪರಿವರ್ತನೆಯ ಪ್ರವೇಶ ದ್ವಾರವಾಗಿ ತನ್ನನ್ನು ತಾನು ಸ್ಥಾಪಿಸಿಕೊಳ್ಳಲಿದೆ ಎಂದು ಮಾಡಿರುವ ಟ್ವೀಟ್ ಗಳಿಗೆ ಮೋದಿ ಪ್ರತಿಕ್ರಿಯೆ ನೀಡಿದ್ದಾರೆ.

ಕರ್ನಾಟಕದ ಶಿವಮೊಗ್ಗ ಹೊಸ ವಿಮಾನ ನಿಲ್ದಾಣ ಕುರಿತು ಪ್ರಧಾನಿ ಟ್ವೀಟ್ ಮಾಡಿದ್ದಾರೆ; “ಶಿವಮೊಗ್ಗದ ವಿಮಾನ ನಿಲ್ದಾಣವು ವಾಣಿಜ್ಯ, ಸಂಪರ್ಕ ಮತ್ತು ಪ್ರವಾಸೋದ್ಯಮವನ್ನು ಹೆಚ್ಚಿಸುತ್ತದೆ” ಎಂದಿದ್ದಾರೆ.

*****