Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಶ್ರೀನಗರದಲ್ಲಿ ಪ್ರಧಾನಿ: ಶೇರ್ – ಇ – ಕಾಶ್ಮೀರ್ ಕೃಷಿ ವಿಜ್ಞಾನ ಹಾಗೂ ತಂತ್ರಜ್ಞಾನ ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಭಾಗಿ; ಮೂಲಸೌಕರ್ಯ ಯೋಜನೆಗಳಿಗೆ ಶಂಕುಸ್ಥಾಪನೆ

ಶ್ರೀನಗರದಲ್ಲಿ ಪ್ರಧಾನಿ: ಶೇರ್ – ಇ – ಕಾಶ್ಮೀರ್ ಕೃಷಿ ವಿಜ್ಞಾನ ಹಾಗೂ ತಂತ್ರಜ್ಞಾನ ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಭಾಗಿ; ಮೂಲಸೌಕರ್ಯ ಯೋಜನೆಗಳಿಗೆ ಶಂಕುಸ್ಥಾಪನೆ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಜಮ್ಮುವಿನಲ್ಲಿ ಶೇರ್ –ಇ- ಕಾಶ್ಮೀರ್ ಕೃಷಿ ವಿಜ್ಞಾನ ಹಾಗೂ ತಂತ್ರಜ್ಞಾನ ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಭಾಗಿಯಾಗಿದ್ದರು. ಮತ್ತೊಂದು ಕಾರ್ಯಕ್ರಮದಲ್ಲಿ ಅವರು, ಪಕಲ್ದುಲ್ ವಿದ್ಯುತ್ ಯೋಜನೆ, ಮತ್ತು ಜಮ್ಮು ವರ್ತುಲ ರಸ್ತೆ ಕಾಮಗಾರಿಗಳಿಗೆ ಶಿಲಾನ್ಯಾಸ ನೆರವೇರಿಸಿದರು. ಶ್ರೀ ಮಾತಾ ವೈಷ್ಣೋದೇವಿ ದೇವಾಲಯ ಮಂಡಳಿಯ ತಾರಾಕೋಟ್ ಮಾರ್ಗ ಮತ್ತು ಮೆಟೀರಿಯಲ್ ರೋಪ್ ವೇಯನ್ನೂ ಉದ್ಘಾಟಿಸಿದರು.

ಘಟಿಕೋತ್ಸವದಲ್ಲಿ ಮಾತನಾಡಿದ ಪ್ರಧಾನಮಂತ್ರಿಯವರು, ತಂತ್ರಜ್ಞಾನವು ಜೀವನದ ಎಲ್ಲ ಸ್ಥರಗಳಲ್ಲಿ ಬದಲಾವಣೆಯನ್ನು ತರುತ್ತದೆ ಮತ್ತು ನಮ್ಮ ದೇಶದ ಯುವಜನರು ಈ ಅಭಿವೃದ್ಧಿಯೊಂದಿಗೆ ವೇಗವನ್ನು ಕಾಯ್ದುಕೊಳ್ಳಬೇಕು ಎಂದರು.

ರೈತರ ಅನುಕೂಲಕ್ಕಾಗಿ ತಂತ್ರಜ್ಞಾನದ ಅಳವಡಿಕೆಯೊಂದಿಗೆ ಕೃಷಿಯಲ್ಲಿ ಹೊಸ ಸಂಸ್ಕೃತಿ ಅಭಿವೃದ್ಧಿ ಪಡಿಸುವ ಅಗತ್ಯವಿದೆ ಎಂದು ಹೇಳಿದರು.

ಕೇಂದ್ರ ಸರ್ಕಾರದ ಹಲವು ನಿರ್ಧಾರಗಳು ಮತ್ತು ನೀತಿಗಳು ರೈತರ ಆದಾಯವನ್ನು ಹೆಚ್ಚಿಸುವ ಗುರಿಯನ್ನು ಹೊಂದಿವೆ ಎಂದು ತಿಳಿಸಿದರು.

ವೈಜ್ಞಾನಿಕ ದೃಷ್ಟಿಕೋನ, ತಾಂತ್ರಿಕ ನಾವಿನ್ಯತೆ ಹಾಗೂ ಸಂಶೋಧನೆ ಮತ್ತು ಅಭಿವೃದ್ಧಿಯ ಮೂಲಕ ಪದವೀ ಪಡೆಯುತ್ತಿರುವ ವಿದ್ಯಾರ್ಥಿಗಳು ಕೃಷಿಯನ್ನು ಲಾಭದಾಯಕ ವೃತ್ತಿಯಾಗಿ ಪರಿವರ್ತಿಸುವಲ್ಲಿ ಸಕ್ರಿಯ ಪಾತ್ರ ವಹಿಸಬಹುದು ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.

ಪಕ್ದುಲ್ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿದ ತರುವಾಯ ಮಾತನಾಡಿದ ಪ್ರಧಾನಿ, ಒಂದು ಜಲ ವಿದ್ಯುತ್ ಯೋಜನೆಯನ್ನು ಉದ್ಘಾಟಿಸಿ, ಮತ್ತೊಂದು ವಿದ್ಯುತ್ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿದ ಈ ದಿನ ಅನನ್ಯವಾದದ್ದು ಎಂದು ಹೇಳಿದರು. ಕೇಂದ್ರ ಸರ್ಕಾರ ” ಪ್ರತ್ಯೇಕತೆಯಿಂದ ಏಕತೆಯೆಡೆಗೆ” ಎಂಬ ದೃಷ್ಟಿಕೋನದೊಂದಿಗೆ ಇಲ್ಲಿಯವರೆಗೆ ಅಭಿವೃದ್ಧಿಯಲ್ಲಿ ಹಿಂದುಳಿದಿರುವ ದೇಶದ ಎಲ್ಲ ಭಾಗಗಳನ್ನು ಅಭಿವೃದ್ಧಿಪಡಿಸುವ ಕಾರ್ಯ ಮಾಡುತ್ತಿದೆ ಎಂದು ಹೇಳಿದರು.

ತಾರಾಕೋಟೆ ಮಾರ್ಗವು ಮಾತಾ ವೈಷ್ಣೋದೇವಿ ದೇವಾಲಯಕ್ಕೆ ತೆರಳಲು ಪರ್ಯಾಯ ಮಾರ್ಗವನ್ನು ಕಲ್ಪಿಸಲಿದ್ದು, ಯಾತ್ರಿಕರಿಗೆ ಅನುಕೂಲವಾಗಲಿದೆ ಎಂದರು. ಪ್ರವಾಸೋದ್ಯಮ, ಅದರಲ್ಲೂ ಧಾರ್ಮಿಕ ಪ್ರವಾಸೋದ್ಯಮವು ಜಮ್ಮು ಮತ್ತು ಕಾಶ್ಮೀರ ರಾಜ್ಯಕ್ಕೆ ಆದಾಯ ಸೃಷ್ಟಿಸುವ ಅತಿ ಮಹತ್ವದ ಮೂಲವಾಗಿದೆ ಎಂದರು.

****