Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಶ್ರೀಮತಿ ತುಳಸಿ ಗೌಡ ಅವರ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಕರ್ನಾಟಕದ ಗೌರವಾನ್ವಿತ ಪರಿಸರವಾದಿ ಮತ್ತು ಪದ್ಮ ಪ್ರಶಸ್ತಿ ಪುರಸ್ಕೃತ ಶ್ರೀಮತಿ ತುಳಸಿ ಗೌಡ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

ಅವರು ಎಕ್ಸ್ ಖಾತೆಯಲ್ಲಿ ಹೀಗೆ ಬರೆದಿದ್ದಾರೆ:

“ಕರ್ನಾಟಕದ ಗೌರವಾನ್ವಿತ ಪರಿಸರವಾದಿ ಮತ್ತು ಪದ್ಮ ಪ್ರಶಸ್ತಿ ಪುರಸ್ಕೃತ ಶ್ರೀಮತಿ ತುಳಸಿ ಗೌಡ  ಅವರ ನಿಧನದಿಂದ ತೀವ್ರ ದುಃಖಿತನಾಗಿದ್ದೇನೆ. ಪ್ರಕೃತಿಯನ್ನು ಪೋಷಿಸಲು, ಸಾವಿರಾರು ಸಸಿಗಳನ್ನು ನೆಡಲು ಮತ್ತು ನಮ್ಮ ಪರಿಸರವನ್ನು ಸಂರಕ್ಷಿಸಲು ಅವರು ತಮ್ಮ ಜೀವನವನ್ನು ಮುಡಿಪಾಗಿಟ್ಟರು. ಅವರು ಪರಿಸರ ಸಂರಕ್ಷಣೆಗೆ ಮಾರ್ಗದರ್ಶಿ ಬೆಳಕಾಗಿ ಉಳಿಯುತ್ತಾರೆ. ಅವರ ಕಾರ್ಯವು ನಮ್ಮ ಭೂಮಿಯನ್ನು ರಕ್ಷಿಸಲು ತಲೆಮಾರುಗಳನ್ನು ಪ್ರೇರೇಪಿಸುತ್ತದೆ. ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ನನ್ನ ಸಂತಾಪಗಳು. ಓಂ ಶಾಂತಿ.” ಎಂದಿದ್ದಾರೆ.

 

 

*****