Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಶ್ರೀ ಎನ್. ವಿಠ್ಠಲ್ ಅವರ ನಿಧನಕ್ಕೆ ಪ್ರಧಾನಮಂತ್ರಿಯವರಿಂದ ಸಂತಾಪ ಸೂಚನೆ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, ಮಾಜಿ ನಾಗರಿಕ ಸೇವಕ, ಶ್ರೀ ಎನ್. ವಿಠ್ಠಲ್ ಅವರ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ.

ತಮ್ಮ ಟ್ವೀಟ್ ನಲ್ಲಿ ಪ್ರಧಾನಮಂತ್ರಿಯವರು;

“ಶ್ರೀ ಎನ್. ವಿಠ್ಠಲ್ ಜಿ ಅವರು ಭಾರತದಲ್ಲಿ ವಿವಿಧ ಕ್ಷೇತ್ರಗಳ ಬೆಳವಣಿಗೆಯನ್ನು ಶ್ರೀಮಂತಗೊಳಿಸಿದ್ದಾರೆ. ಅವರನ್ನು ಅತ್ಯುತ್ತಮ ನಾಗರಿಕ ಸೇವಕರಾಗಿ ನೆನಪಿಸಿಕೊಳ್ಳಲಾಗುತ್ತದೆ. ಅವರು ತಮ್ಮ ವೃತ್ತಿಜೀವನದಲ್ಲಿ ಗುಜರಾತ್ ರಾಜ್ಯದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಅವರ ನಿಧನದಿಂದ ಮನಸ್ಸಿಗೆ ತುಂಬಾ ನೋವಾಗಿದೆ. ಅವರ ಕುಟುಂಬ ಮತ್ತು ಸ್ನೇಹಿತರಿಗೆ ಅವರ ಅಗಲಿಕೆಯನ್ನು ಭರಿಸುವ ಶಕ್ತಿ ಸಿಗಲಿ. ಅವರ ನಿಧನಕ್ಕೆ ನನ್ನ ಸಂತಾಪಗಳು. ಓಂ ಶಾಂತಿ.” ಎಂದು ಹೇಳಿದ್ದಾರೆ.

***