ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಶ್ರೀ ಕಾಮೇಶ್ವರ್ ಚೌಪಾಲ್ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ. ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣದಲ್ಲಿ ಅಮೂಲ್ಯ ಕೊಡುಗೆ ನೀಡಿದ ಬದ್ಧತೆಯುಳ್ಳ ರಾಮಭಕ್ತ ಅವರಾಗಿದ್ದಾರು ಎಂದು ಪ್ರಧಾನಿ ಅವರನ್ನು ಶ್ಲಾಘಿಸಿದ್ದಾರೆ.
ಅವರು ತಮ್ಮ ಸಾಮಾಜಿಕ ಮಾಧ್ಯಮ X ಪೋಸ್ಟ್ ನಲ್ಲಿ ಹೀಗೆ ಬರೆದಿದ್ದಾರೆ.
“ಬಿಜೆಪಿಯ ಹಿರಿಯ ನಾಯಕ ಮತ್ತು ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಟ್ರಸ್ಟಿ ಕಾಮೇಶ್ವರ ಚೌಪಾಲ್ ಜಿ ಅವರ ನಿಧನದಿಂದ ತೀವ್ರ ದುಃಖವಾಗಿದೆ. ಅವರು ರಾಮನ ಕಟ್ಟಾ ಭಕ್ತರಾಗಿದ್ದರು, ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಅಮೂಲ್ಯ ಕೊಡುಗೆ ನೀಡಿದರು. ದಲಿತ ಹಿನ್ನೆಲೆಯಿಂದ ಬಂದ ಕಾಮೇಶ್ವರ್ ಜಿ ಅವರು ಸಮಾಜದ ವಂಚಿತ ಸಮುದಾಯಗಳ ಕಲ್ಯಾಣಕ್ಕಾಗಿ ಮಾಡಿರುವ ಕೆಲಸದಿಂದಾಗಿ ಸದಾ ಸ್ಮರಣೀಯರು. ಈ ದುಃಖದ ಸಮಯದಲ್ಲಿ ಅವರ ಕುಟುಂಬ ಮತ್ತು ಬೆಂಬಲಿಗೆ ನನ್ನ ಸಂತಾಪಗಳು. ಓಂ ಶಾಂತಿ!
*****
भाजपा के वरिष्ठ नेता और राम जन्मभूमि तीर्थ क्षेत्र ट्रस्ट के ट्रस्टी कामेश्वर चौपाल जी के निधन से अत्यंत दुख हुआ है। वे एक अनन्य रामभक्त थे, जिन्होंने अयोध्या में राम मंदिर के निर्माण में बहुमूल्य योगदान दिया। दलित पृष्ठभूमि से आने वाले कामेश्वर जी समाज के वंचित समुदायों के… pic.twitter.com/pmqXNvvqfr
— Narendra Modi (@narendramodi) February 7, 2025