Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಶ್ರೀ ಕೆ.ವಿ. ಸಂಪತ್ ಕುಮಾರ್ ಅವರ ನಿಧನಕ್ಕೆ ಪ್ರಧಾನಿ ಸಂತಾಪ


ಸಂಸ್ಕೃತ ದಿನಪತ್ರಿಕೆ ʻಸುಧರ್ಮʼದ ಸಂಪಾದಕ ಶ್ರೀ ಕೆ.ವಿ.ಸಂಪತ್ ಕುಮಾರ್ ಅವರ ನಿಧನಕ್ಕೆ ಪ್ರಧಾನಿ ಶ್ರೀ ನರೇಂದ್ರ ಮೋದಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. 

ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ, “ಶ್ರೀ ಕೆ.ವಿ. ಸಂಪತ್ ಕುಮಾರ್ ಅವರು ಸ್ಫೂರ್ತಿದಾಯಕ ವ್ಯಕ್ತಿತ್ವದವರಾಗಿದ್ದರು. ಅವರು ವಿಶೇಷವಾಗಿ ಯುವ ಜನಾಂಗದಲ್ಲಿ ಸಂಸ್ಕೃತವನ್ನು ಜನಪ್ರಿಯಗೊಳಿಸಲು ಮತ್ತು ಸಂಸ್ಕೃತವನ್ನು ಸಂರಕ್ಷಿಸಲು ದಣಿವರಿಯದೆ ಶ್ರಮಿಸಿದರು. ಅವರ ಉತ್ಸಾಹ ಮತ್ತು ದೃಢ ನಿಶ್ಚಯ ಸ್ಫೂರ್ತಿದಾಯಕವಾಗಿದ್ದವು. ಅವರ ನಿಧನದಿಂದ ದುಃಖಿತನಾಗಿದ್ದೇನೆ. ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ಸಂತಾಪಗಳು. ಓಂ ಶಾಂತಿ,” ಎಂದು ಹೇಳಿದ್ದಾರೆ. 

***