Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

 ಶ್ರೀ ಕೇಶರಿ ನಾಥ್ ತ್ರಿಪಾಠಿ ಅವರ ನಿಧನಕ್ಕೆ ಪ್ರಧಾನಮಂತ್ರಿಯವರಿಂದ ಸಂತಾಪ 


ಬಿಹಾರ, ಮೇಘಾಲಯ ಮತ್ತು ಮಿಜೋರಾಂ ರಾಜ್ಯಗಳ ರಾಜ್ಯಪಾಲರಾಗಿ ಅಲ್ಪಾವಧಿಗೆ ಹೆಚ್ಚುವರಿಯಾಗಿ ಅಧಿಕಾರ ವಹಿಸಿಕೊಂಡಿದ್ದ ಪಶ್ಚಿಮ ಬಂಗಾಳದ ಮಾಜಿ ರಾಜ್ಯಪಾಲ ಶ್ರೀ ಕೇಶರಿ ನಾಥ್ ತ್ರಿಪಾಠಿ ಅವರ ನಿಧನಕ್ಕೆ  ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. 

ಉತ್ತರ ಪ್ರದೇಶದಲ್ಲಿ ಬಿಜೆಪಿಯನ್ನು ಕಟ್ಟಿಬೆಳೆಸುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದಾರೆ ಮತ್ತು ರಾಜ್ಯದ ಪ್ರಗತಿಗೆ ಶ್ರಮಿಸಿದ್ದಾರೆ ಎಂದು ಪ್ರಧಾನಮಂತ್ರಿ ಅವರು ಹೇಳಿದ್ದಾರೆ.

ಪ್ರಧಾನಮಂತ್ರಿ ಅವರು ಈ ರೀತಿ ಸಂದೇಶ ಟ್ವೀಟ್ ಮಾಡಿದ್ದಾರೆ;

“ಶ್ರೀ ಕೇಸರಿ ನಾಥ್ ತ್ರಿಪಾಠಿ ಜೀ ಅವರ ಸೇವೆ ಮತ್ತು ಬುದ್ಧಿವಂತಿಕೆಗಾಗಿ ಗೌರವಾನ್ವಿತರಾಗಿದ್ದರು.  ಅವರು ಸಾಂವಿಧಾನಿಕ ವಿಷಯಗಳಲ್ಲಿ ಚೆನ್ನಾಗಿ ಅರಿತವರಾಗಿದ್ದರು. ಉತ್ತರ ಪ್ರದೇಶದಲ್ಲಿ ಬಿಜೆಪಿಯನ್ನು ಕಟ್ಟಿಬೆಳೆಸುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದರು ಮತ್ತು ರಾಜ್ಯದ ಪ್ರಗತಿಗೆ ಶ್ರಮಿಸಿದ್ದರು.  ಅವರ ನಿಧನದಿಂದ ಬಹಳ ನೋವಾಗಿದೆ.  ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ನನ್ನ ಸಂತಾಪಗಳು.  ಓಂ ಶಾಂತಿ”

*****