Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಶ್ರೀ ಜಗದೀಶ್ ಥಕ್ಕರ್ ಅವರ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ.


 

ಪ್ರಧಾನಮಂತ್ರಿ ಕಾರ್ಯಾಲಯದ ಸಾರ್ವಜನಿಕ ಸಂಪರ್ಕ ಅಧಿಕಾರಿ ಶ್ರೀ ಜಗದೀಶ್ ಥಕ್ಕರ್ ಅವರ ನಿಧನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.
 
“ಪ್ರಧಾನಮಂತ್ರಿ ಕಾರ್ಯಾಲಯದ ಸಾರ್ವಜನಿಕ ಸಂಪರ್ಕ ಅಧಿಕಾರಿ ಶ್ರೀ ಜಗದೀಶ್ ಥಕ್ಕರ್ ಅವರ ನಿಧನದಿಂದ ತೀವ್ರ ದುಃಖಿತನಾಗಿದ್ದೇನೆ. ಜಗದೀಶ್ ಭಾಯಿ ಅವರು ಹಿರಿಯ ಪತ್ರಕರ್ತರಾಗಿದ್ದರು ಮತ್ತು ಅವರೊಂದಿಗೆ ಹಲವು ವರ್ಷಗಳ ಕಾಲ ಗುಜರಾತ್ ಮತ್ತು ದೆಹಲಿಯಲ್ಲಿ ಸಂತೋಷದಿಂದ ಕೆಲಸ ಮಾಡುವ ಅವಕಾಶ ನನಗೆ ಲಭಿಸಿತ್ತು. ಅವರು  ಸರಳ ಮತ್ತು ಸಹೃದಯ ಸ್ವಭಾವಕ್ಕೆ  ಹೆಸೆರುವಾಸಿಯಾಗಿದ್ದರು.
 
ಬಹಳ ವರ್ಷಗಳಿಂದ ಹಲವಾರು ಪತ್ರಕರ್ತರು ಶ್ರೀ ಜಗದೀಶ್ ಥಕ್ಕರ್ ಅವರೊಂದಿಗೆ ನಿರಂತರ ಸಂವಾದ ನಡೆಸಿರಬಹುದು. ಈ ಹಿಂದೆ ಗುಜರಾತಿನ ಹಲವಾರು ಮುಖ್ಯಮಂತ್ರಿಗಳೊಂದಿಗೆ ಅವರು ಸೇವೆ ಸಲ್ಲಿಸಿದ್ದಾರೆ.  ತಮ್ಮ ಕೆಲಸವನ್ನು ಅತಿಯಾಗಿ ಪ್ರೀತಿಸುತ್ತಿದ್ದ ಶ್ರೀ ಜಗದೀಶ್ ಥಕ್ಕರ್ ಅವರು ಅವನ್ನು ಅತ್ಯಂತ ಕಾರ್ಯತತ್ಪರತೆ ಹಾಗೂ ಶ್ರದ್ಧಾಪೂರ್ವಕವಾಗಿ ಮಾಡುತ್ತಿದ್ದರು. ನಾವೊಬ್ಬ ಉತ್ತಮ ವ್ಯಕ್ತಿಯನ್ನು ಕಳೆದುಕೊಂಡಿದ್ದೇವೆ. ಅವರ ಕುಟುಂಬ ಮತ್ತು ಹಿತೈಷಿಗಳಿಗೆ ಸಂತಾಪ ವ್ಯಕ್ತಪಡಿಸುತ್ತಿದ್ದೇನೆ. “ ಎಂದು ಪ್ರಧಾನಮಂತ್ರಿ ಹೇಳಿದ್ದಾರೆ.