Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಶ್ರೀ ನಟವರ್ ಸಿಂಗ್ ನಿಧನ: ಪ್ರಧಾನಮಂತ್ರಿ ಸಂತಾಪ 


ಇಂದು ನಿಧನ ಹೊಂದಿದ ಮಾಜಿ ವಿದೇಶಾಂಗ ಸಚಿವರಾದ ಶ್ರೀ ನಟವರ್ ಸಿಂಗ್ ಅವರ ನಿಧನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. 

ತಮ್ಮ ಬುದ್ಧಿಶಕ್ತಿ ಮತ್ತು ಸಮೃದ್ಧ ಬರವಣಿಗೆಗೆ ಹೆಸರಾಗಿದ್ದ ರಾಜತಾಂತ್ರಿಕತೆ ಮತ್ತು ವಿದೇಶಾಂಗ ನೀತಿ ವಿಷಯಗಳಲ್ಲಿ ನಟವರ್ ಸಿಂಗ್ ಅವರು ನೀಡಿದ ಶ್ರೀಮಂತ ಕೊಡುಗೆಗಳನ್ನು ಪ್ರಧಾನಮಂತ್ರಿ ಸ್ಮರಿಸಿಕೊಂಡಿದ್ದಾರೆ. 

ಈ ಕುರಿತು ತಮ್ಮ ಟ್ವೀಟ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು,

‘’ಶ್ರೀ ನಟವರ್ ಸಿಂಗ್ ಅವರ ನಿಧನದ ಸುದ್ದಿ ಕೇಳಿ ಬಹಳ ನೋವಾಗಿದೆ. ಅವರು ರಾಜತಾಂತ್ರಿಕತೆ ಮತ್ತು ವಿದೇಶಾಂಗ ನೀತಿಯ ಜಗತ್ತಿಗೆ ಶ್ರೀಮಂತ ಕೊಡುಗೆಗಳನ್ನು ನೀಡಿದ್ದಾರೆ. ತಮ್ಮ ಬುದ್ಧಿವಂತಿಕೆ ಮತ್ತು ಸಮೃದ್ಧ ಬರವಣಿಗೆಗಳಿಂದ ಹೆಸರುವಾಸಿಯಾಗಿದ್ದರು. ಈ ದುಃಖದ ಸಮಯದಲ್ಲಿ ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ನನ್ನ ಸಂತಾಪಗಳನ್ನು ಸೂಚಿಸುತ್ತೇನೆ, ಓಂ ಶಾಂತಿ’’ ಎಂದು ಬರೆದುಕೊಂಡಿದ್ದಾರೆ.

 

 

*****