Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಶ್ರೀ ಸೀತಾರಾಮ್ ಯೆಚೂರಿಯವರ ನಿಧನಕ್ಕೆ ಪ್ರಧಾನಮಂತ್ರಿಯವರು ಸಂತಾಪ ವ್ಯಕ್ತಪಡಿಸಿದ್ದಾರೆ


ಮಾಜಿ ಸಂಸದೀಯ ಪಟು ಶ್ರೀ ಸೀತಾರಾಮ್ ಯೆಚೂರಿ ಅವರ ನಿಧನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ.

ಈ ಬಗ್ಗೆ ಎಕ್ಸ್ ಪೋಸ್ಟ್ ನಲ್ಲಿ ಬರೆದುಕೊಂಡಿರುವ ಅವರು,

“ಶ್ರೀ ಸೀತಾರಾಮ್ ಯೆಚೂರಿ ಅವರ ನಿಧನದ ಸುದ್ದಿ ತೀವ್ರ ದುಃಖ ತಂದಿದೆ. ಎಡಪಂಥೀಯ ನೀತಿಗಳನ್ನು ಹೊಂದಿರುವ ಪಕ್ಷಗಳ ಬೆಳಕಾಗಿದ್ದ ಅವರು ರಾಜಕೀಯ ವಲಯದಲ್ಲಿ ಎಲ್ಲಾ ಪಕ್ಷಗಳ ನಾಯಕರ ಜೊತೆ ಸಂಪರ್ಕ ಸಾಧಿಸುವ ಸಾಮರ್ಥ್ಯ ಹೊಂದಿದ್ದರು. ಉತ್ತಮ ಸಂಸದೀಯಪಟುವಾಗಿ ಕೂಡ ಗುರುತಿಸಿಕೊಂಡಿದ್ದರು. ಈ ದುಃಖದ ಸಮಯದಲ್ಲಿ ಅವರ ಕುಟುಂಬಸ್ಥರು ಮತ್ತು ಅಭಿಮಾನಿಗಳಿಗೆ ನನ್ನ ಸಂತಾಪಗಳನ್ನು ಸೂಚಿಸುತ್ತೇನೆ. ಓಂ ಶಾಂತಿ” ಎಂದು ಹೇಳಿದ್ದಾರೆ.

 

 

*****