Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಸಂಸತ್ ಸದಸ್ಯ ಮತ್ತು ಮಾಜಿ ಸಚಿವ ಶ್ರೀ ರತ್ತನ್ ಲಾಲ್ ಕಟಾರಿಯಾ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂಸತ್ ಸದಸ್ಯ ಮತ್ತು ಮಾಜಿ ಸಚಿವ ಶ್ರೀ ರತ್ತನ್ ಲಾಲ್ ಕಟಾರಿಯಾ ಅವರ ನಿಧನಕ್ಕೆ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.

ಟ್ವೀಟ್ ನಲ್ಲಿ ಪ್ರಧಾನಮಂತ್ರಿ;

“ಸಂಸತ್ ಸದಸ್ಯ ಮತ್ತು ಮಾಜಿ ಸಚಿವ ಶ್ರೀ ರತ್ತನ್ ಲಾಲ್ ಕಟಾರಿಯಾ ಜಿ ಅವರ ನಿಧನದಿಂದ ದುಃಖಿತನಾಗಿದ್ದೇನೆ. ಸಾರ್ವಜನಿಕ ಸೇವೆ ಮತ್ತು ಸಾಮಾಜಿಕ ನ್ಯಾಯಕ್ಕೆ ಅವರು ನೀಡಿದ ಸಮೃದ್ಧ ಕೊಡುಗೆಗಾಗಿ ಅವರನ್ನು ಸ್ಮರಿಸಲಾಗುತ್ತದೆ. ಹರಿಯಾಣದಲ್ಲಿ ಬಿಜೆಪಿಯನ್ನು ಬಲಪಡಿಸುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದರು. ಅವರ ಕುಟುಂಬ ಮತ್ತು ಬೆಂಬಲಿಗರಿಗೆ ನನ್ನ ಸಂತಾಪಗಳು. ಓಂ ಶಾಂತಿ.” ಎಂದು ತಿಳಿಸಿದ್ದಾರೆ. 

*****