Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

​​​​​​​ಸಾವಿತ್ರಿಬಾಯಿ ಫುಲೆ ಮತ್ತು ರಾಣಿ ವೇಲು ನಾಚಿಯಾರ್ ಜಯಂತಿಯಂದು ಪ್ರಧಾನಮಂತ್ರಿ ಅವರಿಂದ ಗೌರವ ನಮನ


ಸಾವಿತ್ರಿಬಾಯಿ ಫುಲೆ ಮತ್ತು ರಾಣಿ ವೇಲು ನಾಚಿಯಾರ್ ಅವರ ಜಯಂತಿಯಂದು ಅವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೌರವ ನಮನ ಸಲ್ಲಿಸಿದ್ದಾರೆ.

ಇಬ್ಬರೂ ತಮ್ಮ ಅನುಭೂತಿ ಮತ್ತು ಧೈರ್ಯದಿಂದ ಸಮಾಜಕ್ಕೆ ಸ್ಫೂರ್ತಿ ನೀಡಿದರು ಮತ್ತು ನಮ್ಮ ರಾಷ್ಟ್ರಕ್ಕೆ ಅವರು ನೀಡಿದ ಕೊಡುಗೆ ಅಮೂಲ್ಯವಾದುದಾಗಿದೆ ಎಂದು ಶ್ರೀ ಮೋದಿ ಹೇಳಿದ್ದಾರೆ.

ಪ್ರಧಾನಮಂತ್ರಿಯವರು ಮನ್ ಕಿ ಬಾತ್ ನಿಂದ ಆಯ್ದ ಭಾಗಗಳನ್ನು ಹಂಚಿಕೊಂಡಿದ್ದಾರೆ, ಅದರಲ್ಲಿ  ಅವರು ಸಾವಿತ್ರಿಬಾಯಿ ಫುಲೆ ಮತ್ತು ರಾಣಿ ವೇಲು ನಾಚಿಯಾರ್ ಅವರ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ.

 ಈ ಬಗ್ಗೆ ಪ್ರಧಾನಮಂತ್ರಿಯವರು X ನಲ್ಲಿ ಪೋಸ್ಟ್ ಮಾಡಿದ್ದಾರೆ;

“ಸಾವಿತ್ರಿಬಾಯಿ ಫುಲೆ ಮತ್ತು ರಾಣಿ ವೇಲು ನಾಚಿಯಾರ್ ಅವರ ಜಯಂತಿಯಂದು ಅವರಿಗೆ ಗೌರವ ನಮನಗಳು. ಅವರಿಬ್ಬರೂ ತಮ್ಮ ಅನುಭೂತಿ ಮತ್ತು ಧೈರ್ಯದಿಂದ ಸಮಾಜಕ್ಕೆ ಸ್ಫೂರ್ತಿ ನೀಡಿದರು. ನಮ್ಮ ದೇಶಕ್ಕೆ ಅವರ ಕೊಡುಗೆ ಅಮೂಲ್ಯವಾದುದು. ಇತ್ತೀಚಿನ #MannKiBaat ನಲ್ಲಿ ನಾವು ಅವರಿಗೆ ಹೇಗೆ ಗೌರವ ಸಲ್ಲಿಸಿದ್ದೇವೆ ಎಂಬುದು ಇಲ್ಲಿದೆ.” ಎಂದವರು ಹೇಳಿದ್ದಾರೆ.