Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಸಾವಿತ್ರಿಬಾಯಿ ಫುಲೆ ಅವರ ಜನ್ಮದಿನದ ಅಂಗವಾಗಿ ಪ್ರಧಾನಮಂತ್ರಿಗಳಿಂದ ಗೌರವ ನಮನ


ಸಾವಿತ್ರಿಬಾಯಿ ಫುಲೆ ಅವರ ಜನ್ಮದಿನದ ಅಂಗವಾಗಿ  ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೌರವ ಸಲ್ಲಿಸಿದರು. ಅವರು ಮಹಿಳಾ ಸಬಲೀಕರಣದ ಆಶಾಕಿರಣ; ಶಿಕ್ಷಣ ಮತ್ತು ಸಾಮಾಜಿಕ ಸುಧಾರಣೆಯ ಆದ್ಯ ಪ್ರವರ್ತರು ಎಂದು ಶ್ರೀ ಮೋದಿ ಅವರು ಶ್ಲಾಘಿಸಿದ್ದಾರೆ.

ಎಕ್ಸ್ ಪೋಸ್ಟ್ ನಲ್ಲಿ ಶ್ರೀ ಮೋದಿ ಅವರು ಹೀಗೆ ಬರೆದಿದ್ದಾರೆ:

“ಸಾವಿತ್ರಿಬಾಯಿ ಫುಲೆ ಅವರ ಜನ್ಮದಿನದಂದು ಅವರಿಗೆ ಗೌರವ ನಮನಗಳು. ಅವರು ಮಹಿಳಾ ಸಬಲೀಕರಣದ ಆಶಾಕಿರಣ ಹಾಗೂ ಶಿಕ್ಷಣ ಮತ್ತು ಸಾಮಾಜಿಕ ಸುಧಾರಣೆಯ ಕ್ಷೇತ್ರದ ಪ್ರವರ್ತಕರು. ಜನರಿಗೆ ಉತ್ತಮ ಗುಣಮಟ್ಟದ ಜೀವನವನ್ನು ಖಚಿತಪಡಿಸಿಕೊಳ್ಳಲು ನಾವು ಕೆಲಸ ಮಾಡುತ್ತಿರುವ ಈ ಸಂದರ್ಭದಲ್ಲಿ ಅವರ ಪ್ರಯತ್ನಗಳು ನಮಗೆ ಸದಾ ಸ್ಫೂರ್ತಿ ನೀಡುತ್ತಲೇ ಇರುತ್ತವೆ.

 

 

*****