ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಇಲ್ಲಿ ಸುಪ್ರೀಂ ಕೋರ್ಟ್ ಆಯೋಜಿಸಿದ್ದ ಸಂವಿಧಾನ ದಿನಾಚರಣೆಯಲ್ಲಿ ಮಾತನಾಡಿದರು. ಭಾರತದ ಮುಖ್ಯ ನ್ಯಾಯಾಧೀಶ ನ್ಯಾಯಮೂರ್ತಿ ಶ್ರೀ ಎನ್.ವಿ.ರಮಣ, ಕೇಂದ್ರ ಸಚಿವ ಶ್ರೀ ಕಿರೆನ್ ರಿಜುಜು, ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ ನ ಹಿರಿಯ ನ್ಯಾಯಮೂರ್ತಿಗಳು, ಭಾರತದ ಅಟಾರ್ನಿ ಜನರಲ್ ಶ್ರೀ ಕೆ.ಕೆ.ವೇಣುಗೋಪಾಲ್ ಮತ್ತು ಸುಪ್ರೀಂ ಕೋರ್ಟ್ ವಕೀಲರ ಸಂಘದ ಅಧ್ಯಕ್ಷ ಶ್ರೀ ವಿಕಾಸ್ ಸಿಂಗ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ, ಬೆಳಗ್ಗೆ ತಾವು ಶಾಸಕಾಂಗ ಮತ್ತು ಕಾರ್ಯಾಂಗದ ಸಹೋದ್ಯೋಗಿಗಳ ನಡುವೆ ಇದ್ದೆ, ಈಗ ನ್ಯಾಯಾಂಗದ ಎಲ್ಲಾ ಶಿಕ್ಷಿತ ಸದಸ್ಯರ ಸಭೆಯಲ್ಲಿ ಒಬ್ಬನಾಗಿದ್ದೇನೆ ಎಂದರು. “ನಾಮಗೆಲ್ಲರಿಗೂ ವಿಭಿನ್ನ ಪಾತ್ರಗಳು, ವಿಭಿನ್ನ ಜವಾಬ್ದಾರಿಗಳು, ವಿಭಿನ್ನ ಕಾರ್ಯವಿಧಾನಗಳು ಇರಬಹುದು, ಆದರೆ ನಮ್ಮ ನಂಬಿಕೆ, ಸ್ಫೂರ್ತಿ ಮತ್ತು ಶಕ್ತಿಯ ಮೂಲ ಒಂದೇ ಆಗಿದೆ – ಅದು ನಮ್ಮ ಸಂವಿಧಾನ”, ಎಂದು ಪ್ರಧಾನಮಂತ್ರಿ ಒತ್ತಿ ಹೇಳಿದರು.
ನಮ್ಮ ಸಂವಿಧಾನ ನಿರ್ಮಾತೃಗಳು ಸ್ವಾತಂತ್ರ್ಯಕ್ಕಾಗಿ ಬದುಕಿದ ಮತ್ತು ಬಲಿದಾನ ಮಾಡಿದ ಜನರ ಕನಸುಗಳ ನಿಟ್ಟಿನಲ್ಲಿ ಸಾವಿರಾರು ವರ್ಷಗಳ ಭಾರತದ ಮಹಾನ್ ಸಂಪ್ರದಾಯವನ್ನು ಪ್ರೀತಿಸುವ ಸಂವಿಧಾನವನ್ನು ನಮಗೆ ನೀಡಿದ್ದಾರೆ ಎಂದು ಪ್ರಧಾನಮಂತ್ರಿ ಹೇಳಿದರು.
ಸ್ವಾತಂತ್ರ್ಯ ಬಂದು ಇಷ್ಟು ವರ್ಷಗಳೇ ಉರುಳಿದ್ದರೂ, ಕುಡಿಯುವ ನೀರು, ಶೌಚಾಲಯ, ವಿದ್ಯುತ್ ಮುಂತಾದ ಮೂಲಭೂತ ಅಗತ್ಯಗಳ ಕ್ಷೇತ್ರಗಳಲ್ಲಿ ಹೆಚ್ಚಿನ ಸಂಖ್ಯೆಯ ನಾಗರಿಕರು ವಂಚಿತರಾಗಿ, ಹೊರಗುಳಿದು ಪರಿತಪಿಸುತ್ತಿರುವುದು ಖಂಡನಾರ್ಹ ಎಂದು ಪ್ರಧಾನಮಂತ್ರಿ ಪ್ರತಿಪಾದಿಸಿದರು. ಅವರ ಜೀವನವನ್ನು ಸುಗಮಗೊಳಿಸಲು ಶ್ರಮಿಸುವುದು ಸಂವಿಧಾನಕ್ಕೆ ನೀಡುವ ಅತ್ಯುತ್ತಮ ಗೌರವವಾಗಿದೆ ಎಂದ ಅವರು, ಈ ನಿರಾಕರಣೆಯಿಂದ ಪರಿಹಾರ ಒದಗಿಸುವ ಬೃಹತ್ ಅಭಿಯಾನ ದೇಶದಲ್ಲಿ ನಡೆಯುತ್ತಿದೆ ಎಂಬ ಸಂತೃಪ್ತಿಯನ್ನು ಅವರು ವ್ಯಕ್ತಪಡಿಸಿದರು.
ಕೊರೊನಾ ಅವಧಿಯಲ್ಲಿ ಕಳೆದ ಹಲವು ತಿಂಗಳುಗಳಿಂದ 80 ಕೋಟಿಗೂ ಹೆಚ್ಚು ಜನರಿಗೆ ಉಚಿತ ಆಹಾರ ಧಾನ್ಯಗಳನ್ನು ಒದಗಿಸಲಾಗಿದೆ ಎಂದು ಪ್ರಧಾನಮಂತ್ರಿ ಹೇಳಿದರು. ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಗೆ 2 ಲಕ್ಷ 6೦ ಸಾವಿರ ಕೋಟಿ ರೂ.ಗೂ ಹೆಚ್ಚು ಖರ್ಚು ಮಾಡುವ ಮೂಲಕ ಸರ್ಕಾರ ಬಡವರಿಗೆ ಉಚಿತ ಆಹಾರ ಧಾನ್ಯಗಳನ್ನು ನೀಡುತ್ತಿದೆ. ಈ ಯೋಜನೆಯನ್ನು ನಿನ್ನೆಯಷ್ಟೇ ಮುಂದಿನ ವರ್ಷದ ಮಾರ್ಚ್ ವರೆಗೆ ವಿಸ್ತರಿಸಲಾಗಿದೆ ಎಂದು ಅವರು ಹೇಳಿದರು. ಬಡವರು, ಮಹಿಳೆಯರು, ಮಂಗಳ ಮುಖಿಯರು, ಬೀದಿ ಬದಿ ವ್ಯಾಪಾರಿಗಳು, ದಿವ್ಯಾಂಗರು ಮತ್ತು ಇತರ ವಲಯಗಳ ಜನರ ಅಗತ್ಯಗಳನ್ನು ಪೂರೈಸಿದರೆ, ಅವರೂ ರಾಷ್ಟ್ರ ನಿರ್ಮಾಣದ ಪ್ರಕ್ರಿಯೆಯಲ್ಲಿ ಸೇರುತ್ತಾರೆ ಮತ್ತು ಸಂವಿಧಾನದ ಮೇಲಿನ ಅವರ ನಂಬಿಕೆ ಬಲಗೊಳ್ಳುತ್ತದೆ ಎಂದು ಪ್ರಧಾನಮಂತ್ರಿ ಹೇಳಿದರು.
ಎಲ್ಲರೊಂದಿಗೆ ಎಲ್ಲರ ವಿಕಾಸ, ಎಲ್ಲರ ವಿಶ್ವಾಸ- ಎಲ್ಲರ ಪ್ರಯತ್ನವು ಸಂವಿಧಾನದ ಸ್ಫೂರ್ತಿಯ ಅತ್ಯಂತ ಶಕ್ತಿಶಾಲಿ ಅಭಿವ್ಯಕ್ತಿಯಾಗಿದೆ ಎಂದು ಪ್ರಧಾನಮಂತ್ರಿ ಹೇಳಿದರು. ಸಂವಿಧಾನಕ್ಕೆ ಸಮರ್ಪಿತವಾದ ಸರ್ಕಾರ, ಅಭಿವೃದ್ಧಿಯಲ್ಲಿ ತಾರತಮ್ಯ ಮಾಡುವುದಿಲ್ಲ ಮತ್ತು ನಾವು ಇದನ್ನು ಮಾಡಿದ್ದೇವೆ ಎಂದರು. ಒಂದು ಕಾಲದಲ್ಲಿ ಸಂಪದ್ಭರಿತ ಜನರಿಗೆ ಮಾತ್ರ ಸೀಮಿತವಾಗಿದ್ದ ಗುಣಮಟ್ಟದ ಮೂಲಸೌಕರ್ಯ ಇಂದು ಕಡು ಬಡವರಿಗೂ ಒಂದೇ ರೀತಿಯ ಸಿಗುತ್ತಿದೆ. ಇಂದು ದೇಶವು ಲಡಾಖ್, ಅಂಡಮಾನ್ ಮತ್ತು ಈಶಾನ್ಯ ಪ್ರದೇಶಗಳ ಅಭಿವೃದ್ಧಿಗೂ ಮುಂಬೈ, ದೆಹಲಿಯಂತಹ ಮೆಟ್ರೋ ನಗರಗಳಿಗೆ ನೀಡುವಷ್ಟೇ ಗಮನ ನೀಡುತ್ತಿದೆ ಎಂದು ಅವರು ಹೇಳಿದರು.
ಇತ್ತೀಚೆಗೆ ಬಿಡುಗಡೆಯಾದ ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆಯ ಫಲಿತಾಂಶಗಳನ್ನು ಉಲ್ಲೇಖಿಸಿದ ಪ್ರಧಾನಮಂತ್ರಿಯವರು, ಲಿಂಗ ಸಮಾನತೆಗೆ ಸಂಬಂಧಿಸಿದಂತೆ, ಪುರುಷರಿಗೆ ಹೋಲಿಸಿದರೆ ಈಗ ಹೆಣ್ಣುಮಕ್ಕಳ ಸಂಖ್ಯೆ ಹೆಚ್ಚುತ್ತಿದೆ ಎಂದು ಹೇಳಿದರು. ಆಸ್ಪತ್ರೆ ಹೆರಿಗೆಗೆ ಹೆಚ್ಚಿನ ಅವಕಾಶಗಳು ಗರ್ಭಿಣಿಯರಿಗೆ ಲಭ್ಯವಾಗುತ್ತಿವೆ. ಇದರಿಂದಾಗಿ ತಾಯಂದಿರ ಮರಣ ಪ್ರಮಾಣ, ಶಿಶು ಮರಣ ಪ್ರಮಾಣ ಕಡಿಮೆಯಾಗುತ್ತಿದೆ ಎಂದರು.
ಇಂದು ಇಡೀ ಜಗತ್ತಿನಲ್ಲಿ ಬೇರೆ ದೇಶದ ವಸಾಹತುವಾಗಿ ಅಸ್ತಿತ್ವದಲ್ಲಿರುವ ಯಾವುದೇ ದೇಶವಿಲ್ಲ ಎಂದು ಪ್ರಧಾನಮಂತ್ರಿ ಹೇಳಿದರು. ಹಾಗೆಂದ ಮಾತ್ರಕ್ಕೆ ವಸಾಹತುಶಾಹಿ ಮನಸ್ಥಿತಿ ಮುಗಿದಿದೆ ಎಂದಲ್ಲ. “ಈ ಮನಸ್ಥಿತಿಯು ಅನೇಕ ವಿರೂಪಗಳಿಗೆ ಕಾರಣವಾಗುತ್ತಿರುವುದನ್ನು ನಾವು ನೋಡುತ್ತಿದ್ದೇವೆ. ಅಭಿವೃದ್ಧಿಶೀಲ ರಾಷ್ಟ್ರಗಳ ಅಭಿವೃದ್ಧಿ ಪ್ರಯಾಣದಲ್ಲಿ ನಾವು ಎದುರಿಸುತ್ತಿರುವ ಅಡೆತಡೆಗಳಲ್ಲಿ ಇದಕ್ಕೆ ಅತ್ಯಂತ ಸ್ಪಷ್ಟ ಉದಾಹರಣೆ ಕಂಡುಬರುತ್ತದೆ. ಅಭಿವೃದ್ಧಿ ಹೊಂದಿದ ಜಗತ್ತು ಇಂದಿನ ಸ್ಥಿತಿಯನ್ನು ತಲುಪಲು ಯಾವ ಮಾರ್ಗ ಅನುಸರಿಸಿತೋ, ಆ ಮಾರ್ಗವನ್ನು ಅಭಿವೃದ್ಧಿಶೀಲ ರಾಷ್ಟ್ರಗಳಿಗೆ ಮುಚ್ಚುವ ಪ್ರಯತ್ನ ನಡೆಯುತ್ತಿದೆ ” ಎಂದು ಅವರು ಹೇಳಿದರು. ಪ್ಯಾರಿಸ್ ಒಪ್ಪಂದದ ಗುರಿಗಳನ್ನು ಅವಧಿಗೂ ಮೊದಲು ಸಾಧಿಸುವ ಪ್ರಕ್ರಿಯೆಯಲ್ಲಿ ಸಾಗಿರುವ ಏಕೈಕ ದೇಶ ಭಾರತವಾಗಿದೆ ಎಂದು ಪ್ರಧಾನಮಂತ್ರಿ ಹೇಳಿದರು. ಆದರೂ, ಪರಿಸರದ ಹೆಸರಿನಲ್ಲಿ, ಭಾರತದ ಮೇಲೆ ವಿವಿಧ ಒತ್ತಡಗಳನ್ನು ಹೇರಲಾಗುತ್ತಿದೆ. ಇದೆಲ್ಲವೂ ವಸಾಹತುಶಾಹಿ ಮನಸ್ಥಿತಿಯ ಫಲಿತಾಂಶವಾಗಿದೆ. “ದುರದೃಷ್ಟವಶಾತ್ ಅಂತಹ ಮನಸ್ಥಿತಿಯಿಂದಾಗಿ, ನಮ್ಮದೇ ದೇಶದ ಅಭಿವೃದ್ಧಿಗೆ ಅಡೆತಡೆಗಳನ್ನು ಒಡ್ಡಲಾಗುತ್ತದೆ. ಕೆಲವೊಮ್ಮೆ ಅಭಿವ್ಯಕ್ತಿ ಸ್ವಾತಂತ್ರ್ಯದ ಹೆಸರಿನಲ್ಲಿ ಮತ್ತು ಕೆಲವೊಮ್ಮೆ ಬೇರೆ ಯಾವುದಾದರೂ ವಿಷಯದ ಸಹಾಯದಿಂದ”, ಅವರು ಪ್ರತಿಪಾದಿಸಿದರು. ಸ್ವಾತಂತ್ರ್ಯ ಚಳವಳಿಯಲ್ಲಿ ಸೃಷ್ಟಿಯಾದ ದೃಢನಿರ್ಧಾರವನ್ನು ಮತ್ತಷ್ಟು ಬಲಪಡಿಸಲು ಈ ವಸಾಹತುಶಾಹಿ ಮನಸ್ಥಿತಿ ದೊಡ್ಡ ಅಡ್ಡಿಯಾಗಿದೆ ಎಂದು ಅವರು ಹೇಳಿದರು. “ನಾವು ಅದನ್ನು ತೊಡೆದುಹಾಕಬೇಕಾಗಿದೆ. ಇದಕ್ಕಾಗಿ ನಮ್ಮ ಅತಿದೊಡ್ಡ ಶಕ್ತಿ, ನಮ್ಮ ಅತಿದೊಡ್ಡ ಸ್ಫೂರ್ತಿ ನಮ್ಮ ಸಂವಿಧಾನ”, ಎಂದು ಅವರು ಹೇಳಿದರು.
ಸರ್ಕಾರ ಮತ್ತು ನ್ಯಾಯಾಂಗ ಎರಡೂ ಸಂವಿಧಾನದ ಗರ್ಭದಿಂದ ಜನ್ಮತಳೆದಿವೆ ಎಂದು ಪ್ರಧಾನಮಂತ್ರಿ ಹೇಳಿದರು. ಆದ್ದರಿಂದ, ಎರಡೂ ಅವಳಿಗಳು. ಈ ಎರಡೂ ಅಸ್ತಿತ್ವಕ್ಕೆ ಬಂದಿರುವುದು ಸಂವಿಧಾನದಿಂದ ಮಾತ್ರ. ಆದ್ದರಿಂದ, ವಿಶಾಲ ದೃಷ್ಟಿಕೋನದಿಂದ, ಇವೆರಡೂ ವಿಭಿನ್ನವಾಗಿರುವಾಗಲೂ ಪರಸ್ಪರ ಪೂರಕವಾಗಿವೆ ಎಂದರು. ಅಧಿಕಾರ ವಿಭಜನೆಯ ಪರಿಕಲ್ಪನೆಯ ಮಹತ್ವವನ್ನು ಒತ್ತಿ ಹೇಳಿದ ಅವರು, ಅಮೃತಕಾಲದಲ್ಲಿ, ಸಾಮಾನ್ಯ ಜನರು ಪ್ರಸ್ತುತ ಹೊಂದಿರುವುದಕ್ಕಿಂತ ಹೆಚ್ಚಿನದಕ್ಕೆ ಅರ್ಹರಿರುವುದರಿಂದ ಸಂವಿಧಾನದ ಸ್ಫೂರ್ತಿಯೊಳಗೆ ಸಾಮೂಹಿಕ ಸಂಕಲ್ಪವನ್ನು ತೋರಿಸುವ ಅಗತ್ಯವಿದೆ ಎಂದು ಹೇಳಿದರು. “ಅಧಿಕಾರದ ವಿಭಜನೆಯ ಬಲವಾದ ಅಡಿಪಾಯದ ಮೇಲೆ, ನಾವು ಸಾಮೂಹಿಕ ಜವಾಬ್ದಾರಿಯ ಹಾದಿಯನ್ನು ಸುಗಮಗೊಳಿಸಬೇಕಾಗಿದೆ, ಮಾರ್ಗಸೂಚಿಯನ್ನು ರಚಿಸಬೇಕಿದೆ, ಗುರಿಗಳನ್ನು ನಿರ್ಧರಿಸಬೇಕಿದೆ ಮತ್ತು ದೇಶವನ್ನು ಅದರ ಗಮ್ಯಸ್ಥಾನಕ್ಕೆ ತೆಗೆದುಕೊಂಡು ಹೋಬಬೇಕಿದೆ” ಎಂದೂ ಅವರು ಹೇಳಿದರು.
***
Addressing the Constitution Day programme at Vigyan Bhawan. https://t.co/xzmEhl5wzi
— Narendra Modi (@narendramodi) November 26, 2021
सुबह मैं विधायिका और कार्यपालिका के साथियों के साथ था।
— PMO India (@PMOIndia) November 26, 2021
और अब न्यायपालिका से जुड़े आप सभी विद्वानों के बीच हूं।
हम सभी की अलग-अलग भूमिकाएं, अलग-अलग जिम्मेदारियां, काम करने के तरीके भी अलग-अलग हो सकते हैं, लेकिन हमारी आस्था, प्रेरणा और ऊर्जा का स्रोत एक ही है - हमारा संविधान: PM
आजादी के लिए जीने-मरने वाले लोगों ने जो सपने देखे थे, उन सपनों के प्रकाश में, और हजारों साल की भारत की महान परंपरा को संजोए हुए, हमारे संविधान निर्माताओं ने हमें संविधान दिया: PM @narendramodi
— PMO India (@PMOIndia) November 26, 2021
कोरोना काल में पिछले कई महीनों से 80 करोड़ से अधिक लोगों को मुफ्त अनाज सुनिश्चचित किया जा रहा है।
— PMO India (@PMOIndia) November 26, 2021
PM गरीब कल्याण अन्न योजना पर सरकार 2 लाख 60 हजार करोड़ रुपए से अधिक खर्च करके गरीबों को मुफ्त अनाज दे रही है।
अभी कल ही हमने इस योजना को अगले वर्ष मार्च तक के लिए बढ़ा दिया है: PM
सबका साथ-सबका विकास, सबका विश्वास-सबका प्रयास, ये संविधान की भावना का सबसे सशक्त प्रकटीकरण है।
— PMO India (@PMOIndia) November 26, 2021
संविधान के लिए समर्पित सरकार, विकास में भेद नहीं करती और ये हमने करके दिखाया है: PM @narendramodi
आज गरीब से गरीब को भी क्वालिटी इंफ्रास्ट्रक्चर तक वही एक्सेस मिल रहा है, जो कभी साधन संपन्न लोगों तक सीमित था।
— PMO India (@PMOIndia) November 26, 2021
आज लद्दाख, अंडमान और नॉर्थ ईस्ट के विकास पर देश का उतना ही फोकस है, जितना दिल्ली और मुंबई जैसे मेट्रो शहरों पर है: PM @narendramodi
Gender Equality की बात करें तो अब पुरुषों की तुलना में बेटियों की संख्या बढ़ रही है।
— PMO India (@PMOIndia) November 26, 2021
गर्भवती महिलाओं को अस्पताल में डिलिवरी के ज्यादा अवसर उपलब्ध हो रहे हैं।
इस वजह से माता मृत्यु दर, शिशु मृत्यु दर कम हो रही है: PM @narendramodi
आज पूरे विश्व में कोई भी देश ऐसा नहीं है जो प्रकट रूप से किसी अन्य देश के उपनिवेश के रूप में exist करता है।
— PMO India (@PMOIndia) November 26, 2021
लेकिन इसका मतलब यह नहीं है कि उपनिवेशवादी मानसिकता, Colonial Mindset समाप्त हो गया है।
हम देख रहे हैं कि यह मानसिकता अनेक विकृतियों को जन्म दे रही है: PM @narendramodi
इसका सबसे स्पष्ट उदाहरण हमें विकासशील देशों की विकास यात्राओं में आ रही बाधाओं में दिखाई देता है।
— PMO India (@PMOIndia) November 26, 2021
जिन साधनों से, जिन मार्गों पर चलते हुए, विकसित विश्व आज के मुकाम पर पहुंचा है, आज वही साधन, वही मार्ग, विकासशील देशों के लिए बंद करने के प्रयास किए जाते हैं: PM @narendramodi
पेरिस समझौते के लक्ष्यों को समय से पहले प्राप्त करने की ओर अग्रसर हम एकमात्र देश हैं।
— PMO India (@PMOIndia) November 26, 2021
और फ़िर भी, ऐसे भारत पर पर्यावरण के नाम पर भाँति-भाँति के दबाव बनाए जाते हैं।
यह सब, उपनिवेशवादी मानसिकता का ही परिणाम है: PM @narendramodi
लेकिन दुर्भाग्य यह है कि हमारे देश में भी ऐसी ही मानसिकता के चलते अपने ही देश के विकास में रोड़े अटकाए जाते है।
— PMO India (@PMOIndia) November 26, 2021
कभी freedom of expression के नाम पर तो कभी किसी और चीज़ का सहारा लेकर: PM @narendramodi
आजादी के आंदोलन में जो संकल्पशक्ति पैदा हुई, उसे और अधिक मजबूत करने में ये कोलोनियल माइंडसेट बहुत बड़ी बाधा है।
— PMO India (@PMOIndia) November 26, 2021
हमें इसे दूर करना ही होगा।
और इसके लिए, हमारी सबसे बड़ी शक्ति, हमारा सबसे बड़ा प्रेरणा स्रोत, हमारा संविधान ही है: PM @narendramodi
सरकार और न्यायपालिका, दोनों का ही जन्म संविधान की कोख से हुआ है।
— PMO India (@PMOIndia) November 26, 2021
इसलिए, दोनों ही जुड़वां संतानें हैं।
संविधान की वजह से ही ये दोनों अस्तित्व में आए हैं।
इसलिए, व्यापक दृष्टिकोण से देखें तो अलग-अलग होने के बाद भी दोनों एक दूसरे के पूरक हैं: PM @narendramodi
In line with the spirit of our Constitution, we are undertaking a development journey at the core of which is inclusion. pic.twitter.com/dy9WVoSfEP
— Narendra Modi (@narendramodi) November 26, 2021
सबका साथ-सबका विकास, सबका विश्वास-सबका प्रयास, ये संविधान की भावना का सबसे सशक्त प्रकटीकरण है।
— Narendra Modi (@narendramodi) November 26, 2021
आज गरीब से गरीब को भी क्वालिटी इंफ्रास्ट्रक्चर तक वही एक्सेस मिल रहा है, जो कभी साधन-संपन्न लोगों तक सीमित था। pic.twitter.com/g1QBuveBlr
Something to think about... pic.twitter.com/rnZldhSnOs
— Narendra Modi (@narendramodi) November 26, 2021
अमृतकाल में भारत अपनी दशकों पुरानी समस्याओं के समाधान तलाशकर नए भविष्य के लिए संकल्प ले रहा है। इसीलिए, देश ने आने वाले 25 सालों के लिए ‘सबका प्रयास’ का आह्वान किया है, जिसमें एक बड़ी भूमिका Judiciary की भी है। pic.twitter.com/pexWjtxC7X
— Narendra Modi (@narendramodi) November 26, 2021
अमृतकाल में भारत अपनी दशकों पुरानी समस्याओं के समाधान तलाशकर नए भविष्य के लिए संकल्प ले रहा है। इसीलिए, देश ने आने वाले 25 सालों के लिए ‘सबका प्रयास’ का आह्वान किया है, जिसमें एक बड़ी भूमिका Judiciary की भी है। pic.twitter.com/pexWjtxC7X
— Narendra Modi (@narendramodi) November 26, 2021