Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಸುಬ್ರಮಣ್ಯ ಭಾರತಿ ಅವರಿಗೆ ನಮನ ಸಲ್ಲಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ


ಕವಿ ಮತ್ತು ಬರಹಗಾರ ಸುಬ್ರಮಣ್ಯ ಭಾರತಿ ಅವರ ಜನ್ಮ ವಾರ್ಷಿಕೋತ್ಸವದ ಅಂಗವಾಗಿ ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೌರವ ನಮನ ಸಲ್ಲಿಸಿದರು.

ಮಧ್ಯಾಹ್ನ 1 ಗಂಟೆಗೆ 7, ಲೋಕ ಕಲ್ಯಾಣ ಮಾರ್ಗದಲ್ಲಿಂದು ನಡೆಯಲಿರುವ ಕಾರ್ಯಕ್ರಮದಲ್ಲಿ ಕೃತಿಗಳ ಸಂಕಲವನ್ನು ಬಿಡುಗಡೆ ಮಾಡಲಾಗುವುದು ಎಂದು ಶ್ರೀ ನರೇಂದ್ರ ಮೋದಿ ಪ್ರಕಟಿಸಿದ್ದಾರೆ.

ಪ್ರಧಾನಮಂತ್ರಿ ಅವರು ತಮ್ಮ ಸಾಮಾಜಿಕ ಜಾಲತಾಣ ಪೋಸ್ಟ್ X ನಲ್ಲಿ ಹೀಗೆ ಬರೆದಿದ್ದಾರೆ. 

“ಸುಬ್ರಮಣ್ಯ ಭಾರತಿ ಅವರ ಜನ್ಮ ವಾರ್ಷಿಕೋತ್ಸವದ ಅಂಗವಾಗಿ ನಾನು ಇಂದು ಅವರಿಗೆ ಗೌರವ ನಮನ ಸಲ್ಲಿಸಿದೆನು. ದಾರ್ಶನಿಕ ಕವಿ, ಬರಹಗಾರ, ಚಿಂತಕ, ಸ್ವಾತಂತ್ರ್ಯ ಹೋರಾಟಗಾರ ಮತ್ತು ಸಮಾಜ ಸುಧಾರಕರಾಗಿದ್ದ ಅವರ ಮಾತುಗಳು ಅಸಂಖ್ಯಾತ ಜನರಲ್ಲಿ ದೇಶಭಕ್ತಿ ಮತ್ತು ಕ್ರಾಂತಿಯ ಕಿಡಿಯನ್ನು ಹೊತ್ತಿಸಿದವು. ಸಮಾನತೆ ಮತ್ತು ಮಹಿಳಾ ಸಬಲೀಕರಣದ ಕುರಿತು ಅವರ ಪ್ರಗತಿಪರ ಆದರ್ಶಗಳು ಸಮಾನ ಸ್ಪೂರ್ತಿದಾಯಕವಾಗಿವೆ.

ಇಂದು ಮಧ್ಯಾಹ್ನ 1 ಗಂಟೆಗೆ ಲೋಕ ಕಲ್ಯಾಣ ಮಾರ್ಗದ 7ರಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಅವರ ಕೃತಿಗಳ ಸಂಕಲನವನ್ನು ಬಿಡುಗಡೆ ಮಾಡುತ್ತೇನೆ. ಈ ಪ್ರಯತ್ನವನ್ನು ಕೈಗೊಂಡಿದ್ದಕ್ಕಾಗಿ ನಾನು ಶ್ರೀ ಸೀನಿ ವಿಶ್ವನಾಥನ್ ಜೀ ಅವರನ್ನು ಅಭಿನಂದಿಸುತ್ತೇನೆ’’.

 

*****