Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಸೆಪ್ಟಂಬರ್ 14ರಂದು ಆಲಿಘಡ್ ನಲ್ಲಿ ರಾಜಾ ಮಹೇಂದ್ರ ಸಿಂಗ್ ರಾಜ್ಯ ವಿಶ್ವವಿದ್ಯಾಲಯಕ್ಕೆ ಶಂಕುಸ್ಥಾಪನೆ ನೆರವೇರಿಸಲಿರುವ ಪ್ರಧಾನಮಂತ್ರಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2021 ಸೆಪ್ಟಂಬರ್ 14ರಂದು ಮಧ್ಯಾಹ್ನ 12 ಗಂಟೆಗೆ ಉತ್ತರ ಪ್ರದೇಶದ ಆಲಿಘಡ್ ನಲ್ಲಿ ರಾಜ ಮಹೇಂದ್ರ ಪ್ರತಾಪ್ ಸಿಂಗ್ ರಾಜ್ಯ ವಿಶ್ವವಿದ್ಯಾಲಯಕ್ಕೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಮತ್ತು ಆನಂತರ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಅಲ್ಲದೆ, ಪ್ರಧಾನಮಂತ್ರಿ ಅವರು ಉತ್ತರ ಪ್ರದೇಶದ ರಕ್ಷಣಾ ಕೈಗಾರಿಕಾ ಕಾರಿಡಾರ್ ಮತ್ತು ರಾಜ ಮಹೇಂದ್ರ ಪ್ರತಾಪ್ ಸಿಂಗ್ ರಾಜ್ಯ ವಿಶ್ವವಿದ್ಯಾಲಯದ ಆಲಿಘಡ್ ವಿಭಾಗದ ಪ್ರದರ್ಶನ ಮಾದರಿಗಳಿಗೆ ಭೇಟಿ ನೀಡಲಿದ್ದಾರೆ.

ರಾಜ ಮಹೇಂದ್ರ ಪ್ರತಾಪ್ ಸಿಂಗ್ ರಾಜ್ಯ ವಿಶ್ವವಿದ್ಯಾಲಯದ ಕುರಿತು

ಶ್ರೇಷ್ಠ ಸ್ವಾತಂತ್ರ್ಯ ಹೋರಾಟಗಾರ, ಶಿಕ್ಷಣ ತಜ್ಞ ಮತ್ತು ಸಮಾಜ ಸುಧಾರಕ ರಾಜ ಮಹೇಂದ್ರ ಪ್ರತಾಪ್ ಸಿಂಗ್ ಅವರ ಗೌರವಾರ್ಥ ಮತ್ತು ಅವರ ಸ್ಮರಣೆಗಾಗಿ ರಾಜ್ಯ ಸರ್ಕಾರ ವಿಶ್ವವಿದ್ಯಾಲಯವನ್ನು ಸ್ಥಾಪನೆ ಮಾಡಿದೆಆಲಿಘಡದ ಕೋಲ್ ತೆಹಸಿಲ್ ಮೂಸೆಪುರ್ ಕರೀಂ ಜರೌಲಿ ಗ್ರಾಮ ಮತ್ತು ಲೋಧಾ ಗ್ರಾಮಗಳ ಒಟ್ಟು 92 ಎಕರೆ ಪ್ರದೇಶದಲ್ಲಿ ವಿಶ್ವವಿದ್ಯಾಲಯ ಸ್ಥಾಪನೆಯಾಗಿದೆ. ಇದು ಆಲಿಘಡ್ ವಿಭಾಗದ 395 ಕಾಲೇಜುಗಳಿಗೆ ಮಾನ್ಯತೆಯನ್ನು ಒದಗಿಸಿದೆ.

ಉತ್ತರ ಪ್ರದೇಶದ ರಕ್ಷಣಾ ಕೈಗಾರಿಕಾ ಕಾರಿಡಾರ್

2018 ಫೆಬ್ರವರಿ 21ರಂದು ಲಕ್ನೋದಲ್ಲಿ ನಡೆದ ಯುಪಿ ಹೂಡಿಕೆದಾರರ ಶೃಂಗಸಭೆಯ ಉದ್ಘಾಟನೆ ವೇಳೆ ಪ್ರಧಾನಮಂತ್ರಿ ಅವರು ಉತ್ತರಪ್ರದೇಶದಲ್ಲಿ ರಕ್ಷಣಾ ಕೈಗಾರಿಕಾ ಕಾರಿಡಾರ್ ಸ್ಥಾಪನೆ ಮಾಡುವುದಾಗಿ ಪ್ರಕಟಿಸಿದ್ದರು. ಒಟ್ಟು ಆರು ವಿಭಾಗಗಳಲ್ಲಿಆಲಿಘಡ್, ಆಗ್ರಾ, ಕಾನ್ಪುರ್, ಚಿತ್ರಕೂಟ್, ಝಾನ್ಸಿ ಮತ್ತು ಲಕ್ನೋ ಗಳಲ್ಲಿ ರಕ್ಷಣಾ ಕೈಗಾರಿಕಾ ಕಾರಿಡಾರ್ ಸ್ಥಾಪಿಸಲು ಯೋಜಿಸಲಾಗಿತ್ತು. ಆಲಿಘಡ್ ವಿಭಾಗದಲ್ಲಿ, ಭೂ ಹಂಚಿಕೆ ಪ್ರಕ್ರಿಯೆ ಮುಕ್ತಾಯಗೊಂಡಿದೆ ಮತ್ತು 19 ಕಂಪನಿಗಳಿಗೆ ಭೂಮಿ ಹಂಚಿಕೆ ಮಾಡಲಾಗಿದ್ದು, ಕಂಪನಿಗಳು 1245 ಕೋಟಿ ರೂ. ಹೂಡಿಕೆ ಮಾಡಲಿವೆ.

ಉತ್ತರ ಪ್ರದೇಶದ ರಕ್ಷಣಾ ಕೈಗಾರಿಕಾ ಕಾರಿಡಾರ್, ರಕ್ಷಣಾ ಉತ್ಪಾದನಾ ವಲಯದಲ್ಲಿ ಸ್ವಾವಲಂಬನೆ ಸಾಧಿಸಲು ಸಹಕಾರಿಯಾಗುವುದು ಮಾತ್ರವಲ್ಲ, ಜೊತೆಮೇಕ್ ಇನ್ ಇಂಡಿಯಾಗೂ ಉತ್ತೇಜನ ನೀಡಲಿದೆ.

ಕಾರ್ಯಕ್ರಮದಲ್ಲಿ ಉತ್ತರಪ್ರದೇಶದ ರಾಜ್ಯಪಾಲರು ಮತ್ತು ಮುಖ್ಯಮಂತ್ರಿ ಭಾಗವಹಿಸಲಿದ್ದಾರೆ.

***