ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2021ರ ಸೆಪ್ಟೆಂಬರ್ 11ರಂದು ಬೆಳಿಗ್ಗೆ 11 ಗಂಟೆಗೆ ಸರ್ದಾರ್ ಧಾಮ್ಭವನದ ಲೋಕಾರ್ಪಣೆ ಮತ್ತು ಸರ್ದಾರ್ಧಾಮ್ 2ನೇ ಹಂತದ ಬಾಲಕಿಯರ ವಿದ್ಯಾರ್ಥಿನಿಲಯದ ಭೂಮಿ ಪೂಜೆಯನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ನೆರವೇರಿಸಲಿದ್ದಾರೆ.
ಸರ್ದಾರ್ಧಾಮ್ ಶೈಕ್ಷಣಿಕ ಮತ್ತು ಸಾಮಾಜಿಕ ಪರಿವರ್ತನೆ, ಸಮಾಜದ ದುರ್ಬಲ ವರ್ಗಗಳ ಸಬಲೀಕರಣ ಮತ್ತು ಯುವಕರಿಗೆ ಉದ್ಯೋಗಾವಕಾಶಗಳನ್ನು ಒದಗಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದೆ. ಅಹಮದಾಬಾದ್ನಲ್ಲಿ ಸ್ಥಾಪಿಸಲಾದ ಸರ್ದಾರ್ಧಾಮ್ ಭವನವು ಆಧುನಿಕ ಮೂಲಸೌಕರ್ಯಗಳೊಂದಿಗೆ ವಿದ್ಯಾರ್ಥಿಗಳಿಗೆ ಅತ್ಯಾಧುನಿಕ ಸೌಲಭ್ಯಗಳನ್ನು ಒಳಗೊಂಡಿದೆ. ಬಾಲಕಿಯರ ವಿದ್ಯಾರ್ಥಿನಿಲಯದಲ್ಲಿ ಆರ್ಥಿಕ ಮಾನದಂಡಗಳನ್ನು ಲೆಕ್ಕಿಸದೆ 2000 ಬಾಲಕಿಯರಿಗೆ ವಸತಿ ಸೌಲಭ್ಯ ಒದಗಿಸಲಾಗುವುದು.
ಈ ಸಂದರ್ಭದಲ್ಲಿ ಗುಜರಾತ್ನ ಮುಖ್ಯಮಂತ್ರಿಗಳು ಮತ್ತು ಉಪ ಮುಖ್ಯಮಂತ್ರಿಗಳೂ ಉಪಸ್ಥಿತರಿರಲಿದ್ದಾರೆ.
***