ಶಿಕ್ಷಕರ ದಿನದ ಸಂದರ್ಭದಲ್ಲಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2022ರ ಸಾಲಿನಲ್ಲಿ ಶಿಕ್ಷಕರಿಗಾಗಿ ನೀಡುವ ರಾಷ್ಟ್ರೀಯ ಪ್ರಶಸ್ತಿಗಳ ಪುರಸ್ಕೃತರೊಂದಿಗೆ 5 ಸೆಪ್ಟೆಂಬರ್, 2022 ರಂದು ಸಂಜೆ 4:30 ಕ್ಕೆ 7, ಲೋಕ ಕಲ್ಯಾಣ ಮಾರ್ಗದಲ್ಲಿ ಸಂವಾದ ನಡೆಸಲಿದ್ದಾರೆ.
ತಮ್ಮ ಬದ್ಧತೆ ಮತ್ತು ಕಠಿಣ ಪರಿಶ್ರಮದ ಮೂಲಕ ಶಾಲಾ ಶಿಕ್ಷಣದ ಗುಣಮಟ್ಟವನ್ನು ಸುಧಾರಿಸಿದ ಹಾಗೂ ಅದರ ಜೊತೆಗೆ ತಮ್ಮ ವಿದ್ಯಾರ್ಥಿಗಳ ಜೀವನವನ್ನು ಶ್ರೀಮಂತಗೊಳಿಸಿರುವ ದೇಶದ ಕೆಲವು ಅತ್ಯುತ್ತಮ ಶಿಕ್ಷಕರ ಅನನ್ಯ ಕೊಡುಗೆಯನ್ನು ಆಚರಿಸುವುದು ಮತ್ತು ಗೌರವಿಸುವುದೇ, ಶಿಕ್ಷಕರಿಗೆ ರಾಷ್ಟ್ರೀಯ ಪ್ರಶಸ್ತಿಗಳನ್ನು ನೀಡುವ ಮುಖ್ಯ ಉದ್ದೇಶವಾಗಿದೆ.
ಪ್ರಾಥಮಿಕ ಮತ್ತು ಮಾಧ್ಯಮಿಕ ಶಾಲೆಗಳಲ್ಲಿ ಕೆಲಸ ಮಾಡುವ ಪ್ರತಿಭಾನ್ವಿತ ಶಿಕ್ಷಕರಿಗೆ ಸಾರ್ವಜನಿಕ ಮನ್ನಣೆಯ ಪ್ರತೀಕವಾಗಿ ಶಿಕ್ಷಕರ ರಾಷ್ಟ್ರೀಯ ಪ್ರಶಸ್ತಿಗಳು ನೀಡಲಾಗುತ್ತದೆ. ಕಠಿಣ ಮತ್ತು ಪಾರದರ್ಶಕ ರೀತಿಯಲ್ಲಿ ಮೂರು ಹಂತದ ಆನ್ಲೈನ್ ಪ್ರಕ್ರಿಯೆಯ ಮೂಲಕ ಈ ವರ್ಷ ಪ್ರಶಸ್ತಿಗಾಗಿ ದೇಶಾದ್ಯಂತ 45 ಶಿಕ್ಷಕರನ್ನು ಆಯ್ಕೆ ಮಾಡಲಾಗಿದೆ.
*****