Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಸ್ವಾಮಿ ಶ್ರೀ ನಾರಾಯಣ ಗುರು ಅವರ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಸಮಾಜ ಸುಧಾರಕ ಶ್ರೀ ನಾರಾಯಣ ಗುರು ಅವರ ಜಯಂತಿ ಸಂದರ್ಭದಲ್ಲಿ ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.

“ನಾನು ಪೂಜ್ಯ ಸ್ವಾಮಿ ಶ್ರೀ ನಾರಾಯಣ ಗುರು ಅವರ ಜಯಂತಿ ಸಂದರ್ಭದಲ್ಲಿ ಅವರಿಗೆ ತಲೆಬಾಗುತ್ತೇನೆ. ಅವರ ಶ್ರೇಷ್ಠ ಚಿಂತನೆಗಳು, ಬೋಧನೆಗಳು ಮತ್ತು ಅನ್ಯಾಯದ ವಿರುದ್ಧದ ಹೋರಾಟ ಸದಾ ಪ್ರೇರಣೆ ನೀಡುತ್ತವೆ”, ಎಂದು ಪ್ರಧಾನಿ ತಿಳಿಸಿದ್ದಾರೆ.

ಶ್ರೀ ನಾರಾಯಣ ಗುರು ಅವರು ಕೇರಳದ ಸಮಾಜ ಸುಧಾರಕರು. ಜಾತಿ ಪದ್ಧತಿಯ ವಿರುದ್ಧ ಚಳವಳಿ ನಡೆಸಿದ ಅವರು, ಆಧ್ಯಾತ್ಮಿಕ ಸ್ವಾತಂತ್ರ್ಯ ಮತ್ತು ಸಾಮಾಜಿಕ ಸಮಾನತೆಯ ಹೊಸ ಮೌಲ್ಯಗಳನ್ನು ಉತ್ತೇಜಿಸಿದರು.