Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಹಿರಿಯ ಚಲನಚಿತ್ರ ನಿರ್ಮಾಪಕ ಶ್ರೀ ಶ್ಯಾಮ್ ಬೆನೆಗಲ್ ಅವರ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹಿರಿಯ ಚಲನಚಿತ್ರ ನಿರ್ಮಾಪಕ ಶ್ರೀ ಶ್ಯಾಮ್ ಬೆನೆಗಲ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

ಈ ಸಂಬಂಧ ಪ್ರಧಾನಮಂತ್ರಿ ಅವರು ಎಕ್ಸ್ ಖಾತೆಯಲ್ಲಿ ಹೀಗೆ ಹೇಳಿದ್ದಾರೆ:

“ಭಾರತೀಯ ಚಿತ್ರರಂಗದ ಮೇಲೆ ಆಳವಾದ ಪ್ರಭಾವ ಬೀರಿದ ಶ್ರೀ ಶ್ಯಾಮ್ ಬೆನಗಲ್ ಜೀ ಅವರ ನಿಧನದಿಂದ ತೀವ್ರ ದುಃಖಿತನಾಗಿದ್ದೇನೆ. ಅವರ ಕೃತಿಗಳನ್ನು ಜೀವನದ ವಿವಿಧ ಸ್ತರಗಳ ಜನರು ಮೆಚ್ಚುತ್ತಲೇ ಇರುತ್ತಾರೆ. ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ನನ್ನ ಸಂತಾಪಗಳು. ಓಂ ಶಾಂತಿ,” ಎಂದಿದ್ದಾರೆ.

 

 

*****