Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಹೆಚ್ಚುವರಿ ಕಾರ್ಯದರ್ಶಿಗಳು ಮತ್ತು ಜಂಟಿ ಕಾರ್ಯದರ್ಶಿಗಳೊಂದಿಗೆ ಪ್ರಧಾನಿಯವರ ಐದನೇ ಸಂವಾದ

ಹೆಚ್ಚುವರಿ ಕಾರ್ಯದರ್ಶಿಗಳು ಮತ್ತು ಜಂಟಿ ಕಾರ್ಯದರ್ಶಿಗಳೊಂದಿಗೆ ಪ್ರಧಾನಿಯವರ ಐದನೇ ಸಂವಾದ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಶುಕ್ರವಾರ ಭಾರತ ಸರ್ಕಾರದಲ್ಲಿ ಸೇವೆ ಸಲ್ಲಿಸುತ್ತಿರುವ 90ಕ್ಕೂ ಹೆಚ್ಚು ಜಂಟಿ ಕಾರ್ಯದರ್ಶಿಗಳು ಹಾಗೂ ಹೆಚ್ಚುವರಿ ಕಾರ್ಯದರ್ಶಿಗಳನ್ನು ಭೇಟಿ ಮಾಡಿ, ಅವರೊಂದಿಗೆ ಸಂವಾದ ನಡೆಸಿದರು. ಐದು ಇಂಥ ಸಂವಾದಗಳಲ್ಲಿ ಇದು ಕೊನೆಯ ಸಂವಾದವಾಗಿತ್ತು.

ಈ ಸಂವಾದದ ವೇಳೆ ಅಧಿಕಾರಿಗಳು ಆಡಳಿತ, ಸಮಾಜ ಕಲ್ಯಾಣ, ಬುಡಕಟ್ಟು ಅಭಿವೃದ್ಧಿ, ಕೃಷಿ, ತೋಟಗಾರಿಕೆ, ಪರಿಸರ ಮತ್ತು ಅರಣ್ಯ, ಶಿಕ್ಷಣ, ಯೋಜನೆ ಅನುಷ್ಠಾನ, ನಗರಾಭಿವೃದ್ಧಿ ಮತ್ತು ಸಾರಿಗೆ ಕುರಿತ ತಮ್ಮ ಅನುಭವಗಳನ್ನು ಹಂಚಿಕೊಂಡರು.

ಪ್ರಧಾನಮಂತ್ರಿಯವರು ಆಡಳಿತ ಪ್ರಕ್ರಿಯೆಯನ್ನು ಸರಳೀಕರಿಸುವ ನಿಟ್ಟಿನಲ್ಲಿ ಶ್ರಮಿಸುವಂತೆ ಅಧಿಕಾರಿಗಳಿಗೆ ಆಗ್ರಹಿಸಿದರು. ಉತ್ತಮವಾಗಿ ಜಾರಿ ಮಾಡಿರುವ ಯೋಜನೆ ಮತ್ತು ಕಾರ್ಯಕ್ರಮಗಳನ್ನು ಅಧ್ಯಯನದ ವಸ್ತು ಮಾಡಿಕೊಳ್ಳುವಂತೆ ತಿಳಿಸಿದ ಅವರು, ಇದರಿಂದ ಯಶಸ್ಸು ಸಾಧ್ಯವಾಗುತ್ತದೆ ಎಂದರು.

ಪ್ರಸ್ತುತ ಭಾರತದ ಪರವಾಗಿ ಇರುವ ಧನಾತ್ಮಕ ಜಾಗತಿಕ ಪರಿಸರದ ಬಗ್ಗೆ ಒತ್ತಿ ಹೇಳಿದ ಪ್ರಧಾನ ಮಂತ್ರಿ ಅವರು , 2022ರ ಹೊತ್ತಿಗೆ ನವ ಭಾರತ ನಿರ್ಮಾಣಕ್ಕೆ ಸ್ಪಷ್ಟ ಉದ್ದೇಶದೊಂದಿಗೆ ಮುಂದುವರಿಯುವಂತೆ ಸೂಚಿಸಿದರು.

******

AKT.AK