Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

​​​​​​​ಸಶಸ್ತ್ರ ಪಡೆಗಳ ಧ್ವಜ ದಿನದಂದು ಸಶಸ್ತ್ರ ಪಡೆಗಳಿಗೆ ಪ್ರಧಾನಿ ನರೇಂದ್ರ ಮೋದಿ ವಂದನೆ

​​​​​​​ಸಶಸ್ತ್ರ ಪಡೆಗಳ ಧ್ವಜ ದಿನದಂದು ಸಶಸ್ತ್ರ ಪಡೆಗಳಿಗೆ ಪ್ರಧಾನಿ ನರೇಂದ್ರ ಮೋದಿ ವಂದನೆ


ಸಶಸ್ತ್ರ ಪಡೆಗಳ ಶೌರ್ಯ ಮತ್ತು ತ್ಯಾಗವನ್ನು ಕೊಂಡಾಡಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು ಸಶಸ್ತ್ರ ಪಡೆಗಳ ಧ್ವಜ ದಿನದ ಅಂಗವಾಗಿ ವಂದನೆ ಸಲ್ಲಿಸಿದ್ದಾರೆ. 

ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನ ಮಂತ್ರಿಗಳು,

“ಇಂದು, ಸಶಸ್ತ್ರ ಪಡೆಗಳ ಧ್ವಜ ದಿನದಂದು, ನಾವು ನಮ್ಮ ಸಶಸ್ತ್ರ ಪಡೆಗಳ ಶೌರ್ಯ ಮತ್ತು ತ್ಯಾಗವನ್ನು ಸ್ಮರಿಸುತ್ತೇವೆ. ದಶಕಗಳಿಂದ ಅವರು ನಮ್ಮ ರಾಷ್ಟ್ರವನ್ನು ರಕ್ಷಿಸುವಲ್ಲಿ ಮತ್ತು ಬಲಿಷ್ಠ ಭಾರತ ನಿರ್ಮಾಣಕ್ಕೆ ಕೊಡುಗೆ ನೀಡುವಲ್ಲಿ ಮುಂಚೂಣಿಯಲ್ಲಿದ್ದಾರೆ. ಈ ಸಂದರ್ಭದಲ್ಲಿ ಸಶಸ್ತ್ರ ಪಡೆಗಳ ಧ್ವಜ ನಿಧಿಗೆ ಕೊಡುಗೆ ನೀಡುವಂತೆ ಈ ಸಂದರ್ಭದಲ್ಲಿ ನಿಮ್ಮೆಲ್ಲರನ್ನು ಒತ್ತಾಯಿಸುತ್ತೇನೆ” ಎಂದಿದ್ದಾರೆ.

***