Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

10 ಲಕ್ಷ ಸಿಬ್ಬಂದಿಯ ನೇಮಕಾತಿ ಅಭಿಯಾನ – ಉದ್ಯೋಗ ಮೇಳಕ್ಕೆ ಅಕ್ಟೋಬರ್ 22 ರಂದು ಪ್ರಧಾನಿ ಚಾಲನೆ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಕ್ಟೋಬರ್ 22 ರಂದು ಬೆಳಿಗ್ಗೆ 11 ಗಂಟೆಗೆ ವೀಡಿಯೋ ಕಾನ್ಫರೆನ್ಸಿಂಗ್ ಮೂಲಕ 10 ಲಕ್ಷ ಸಿಬ್ಬಂದಿಯ ನೇಮಕಾತಿ ಅಭಿಯಾನ –ಉದ್ಯೋಗ ಮೇಳಕ್ಕೆ ಚಾಲನೆ ನೀಡಲಿದ್ದಾರೆ. ಸಮಾರಂಭದಲ್ಲಿ ಹೊಸದಾಗಿ ನೇಮಕವಾದ 75,000 ಮಂದಿಗೆ ನೇಮಕಾತಿ ಪತ್ರಗಳನ್ನು ವಿತರಿಸಲಾಗುವುದು. ಈ ಸಂದರ್ಭದಲ್ಲಿ ಪ್ರಧಾನಿಯವರು ನೇಮಕಗೊಂಡವರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಯುವಕರಿಗೆ ಉದ್ಯೋಗಾವಕಾಶಗಳನ್ನು ಒದಗಿಸುವ ಮತ್ತು ನಾಗರಿಕರ ಕಲ್ಯಾಣವನ್ನು ಖಾತ್ರಿಪಡಿಸುವ ಪ್ರಧಾನ ಮಂತ್ರಿಯವರ ಬದ್ಧತೆಯನ್ನು ಈಡೇರಿಸುವ ನಿಟ್ಟಿನಲ್ಲಿ ಇದು ಮಹತ್ವದ ಹೆಜ್ಜೆಯಾಗಿದೆ. ಪ್ರಧಾನಮಂತ್ರಿಯವರ ನಿರ್ದೇಶನದಂತೆ, ಎಲ್ಲಾ ಸಚಿವಾಲಯಗಳು ಮತ್ತು ಇಲಾಖೆಗಳು ಮಂಜೂರಾದ ಹುದ್ದೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅಭಿಯಾನ ಮಾದರಿಯಲ್ಲಿ ಕೆಲಸ ಮಾಡುತ್ತಿವೆ.

ದೇಶಾದ್ಯಂತ ಆಯ್ಕೆಯಾಗಿರುವ ಹೊಸ ಉದ್ಯೋಗಿಗಳು ಭಾರತ ಸರ್ಕಾರದ 38 ಸಚಿವಾಲಯಗಳು/ಇಲಾಖೆಗಳಿಗೆ ಸೇರಿವೆ. ನೇಮಕಗೊಂಡವರು ವಿವಿಧ ಹಂತಗಳಲ್ಲಿ ಗ್ರೂಪ್ – ಎ, ಗ್ರೂಪ್ – ಬಿ (ಗೆಜೆಟೆಡ್), ಗ್ರೂಪ್ – ಬಿ (ನಾನ್ ಗೆಜೆಟೆಡ್) ಮತ್ತು ಗ್ರೂಪ್ – ಸಿ ಹಂತಗಳಲ್ಲಿ ಸರ್ಕಾರಕ್ಕೆ ಸೇರುತ್ತಾರೆ. ನೇಮಕಾತಿಯಾಗುತ್ತಿರುವ ಹುದ್ದೆಗಳಲ್ಲಿ ಕೇಂದ್ರ ಸಶಸ್ತ್ರ ಪಡೆ ಸಿಬ್ಬಂದಿ, ಸಬ್ ಇನ್‌ಸ್ಪೆಕ್ಟರ್, ಕಾನ್ಸ್‌ಟೇಬಲ್, ಎಲ್‌ಡಿಸಿ, ಸ್ಟೆನೋ, ಪಿಎ, ಆದಾಯ ತೆರಿಗೆ ತನಿಖಾಧಿಕಾರಿಗಳು, ಎಂಟಿಎಸ್‌ ಸೇರಿವೆ.

ಈ ನೇಮಕಾತಿಗಳನ್ನು ಸಚಿವಾಲಯಗಳು ಮತ್ತು ಇಲಾಖೆಗಳು ಸ್ವತಃ ಅಥವಾ ಯುಪಿಎಸ್‌ಸಿ, ಎಸ್‌ಎಸ್‌ಸಿ, ರೈಲ್ವೇ ನೇಮಕಾತಿ ಮಂಡಳಿಯಂತಹ ನೇಮಕಾತಿ ಸಂಸ್ಥೆಗಳ ಮೂಲಕ ಮಾಡಲಾಗುತ್ತಿದೆ. ತ್ವರಿತ ನೇಮಕಾತಿಗಾಗಿ, ಆಯ್ಕೆ ಪ್ರಕ್ರಿಯೆಗಳನ್ನು ಸರಳೀಕರಿಸಲಾಗಿದೆ ಮತ್ತು ತಂತ್ರಜ್ಞಾನವನ್ನು ಬಳಸಿಕೊಳ್ಳಲಾಗಿದೆ.

*****