Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

2018ರ ಸಾಲಿನ ಏಷ್ಯನ್ ಪ್ಯಾರಾ ಗೇಮ್ಸ್ ಪದಕ ವಿಜೇತರನ್ನು ಪ್ರಧಾನಮಂತ್ರಿ ಸನ್ಮಾನಿಸಿದರು


2018ರ ಸಾಲಿನ ಏಷ್ಯನ್ ಪ್ಯಾರಾ ಗೇಮ್ಸ್ ಪದಕ ವಿಜೇತರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭೇಟಿಯಾಗಿ ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿ ಅವರು, ಪದಕ ವಿಜೇತರನ್ನು ಸ್ವಾಗತಿಸಲು ಬಹಳ ಸಂತೋಷವಾಗುತ್ತಿದೆ ಎಂದರು. ಪದಕ ವಿಜೇತರ ಕ್ರೀಡಾಪ್ರದರ್ಶನವನ್ನು ಪ್ರಶಂಸಿಸುತ್ತಾ, ಮಾನಸಿಕ ಶಕ್ತಿಯೇ ಇವರ ಯಶಸ್ಸಿನ ಬೆನ್ನೆಲುಬು ಎಂದರು. ಜಾಗತಿಕ ಮಟ್ಟದಲ್ಲಿ ಭಾರತದ ಕೀರ್ತಿ ಹೆಚ್ಚಿಸಲು ನೀಡಿದಕೊಡುಗೆಗಾಗಿ ಪ್ರಧಾನಮಂತ್ರಿ ಕ್ರೀಡಾಪಟುಗಳನ್ನು ಅಭಿನಂದಿಸಿದರು.
ಪದಕ ವಿಜೇತರ ತರಬೇತುದಾರರಿಗೂ ಪ್ರಧಾನಮಂತ್ರಿ ಅವರು ಅಭಿನಂದನೆ ಸಲ್ಲಿಸಿದರು.

ಕ್ರೀಡಾಪಟುಗಳು ಸದಾ ಆಶಾವಾದಿಗಳಾಗಿದ್ದು , ಇನ್ನಷ್ಟು ಎತ್ತರಕ್ಕೇರಲು ಪ್ರಯತ್ನಿಸಬೇಕು ಎಂದು ಪ್ರಧಾನಮಂತ್ರಿ ಹೇಳಿದರು.