Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

2023ರ ದಕ್ಷಿಣ ಏಷ್ಯಾ ಫುಟ್ಬಾಲ್ ಫೆಡರೇಶನ್ ಚಾಂಪಿಯನ್ಶಿಪ್ ಅನ್ನು ಗೆದ್ದ ಭಾರತೀಯ ಫುಟ್ಬಾಲ್ ತಂಡವನ್ನು  ಅಭಿನಂದಿಸಿದ ಪ್ರಧಾನಮಂತ್ರಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, 2023ರ ದಕ್ಷಿಣ ಏಷ್ಯಾ ಫುಟ್ಬಾಲ್ ಫೆಡರೇಶನ್ ಚಾಂಪಿಯನ್ಶಿಪ್ ಗೆದ್ದ ಭಾರತೀಯ ಫುಟ್ಬಾಲ್ ತಂಡವನ್ನು ಅಭಿನಂದಿಸಿದ್ದಾರೆ.

ಪ್ರಧಾನಮಂತ್ರಿಯವರು;

“ಭಾರತ ಮತ್ತೊಮ್ಮೆ ಚಾಂಪಿಯನ್ ಆಗಿ ಮೆರೆದಿದೆ. 2023ರ ದಕ್ಷಿಣ ಏಷ್ಯಾ ಫುಟ್ಬಾಲ್ ಫೆಡರೇಶನ್ ಚಾಂಪಿಯನ್ಶಿಪ್ ನಲ್ಲಿ ಬ್ಲೂ ಟೈಗರ್ಸ್ ತಂಡ ಮೇಲುಗೈ ಸಾಧಿಸಿದೆ! ನಮ್ಮ ಆಟಗಾರರಿಗೆ ಹೃತ್ಪೂರ್ವಕ ಅಭಿನಂದನೆಗಳು. ನಮ್ಮ ಆಟಗಾರರ ದೃಢ ನಿಶ್ಚಯದಿಂದ ಪ್ರೇರಿತವಾದ ಭಾರತೀಯ ತಂಡದ ಗಮನಾರ್ಹ ಆಟಗಾರಿಕೆಯು ಮುಂಬರುವ ಕ್ರೀಡಾಪಟುಗಳಿಗೆ ಸ್ಫೂರ್ತಿಯ ಸೆಲೆಯಾಗಿದೆ” ಎಂದು ಟ್ವೀಟ್ ಮಾಡಿದ್ದಾರೆ.

***