Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

50ನೇ ಏಕದಿನ ಅಂತಾರಾಷ್ಟ್ರೀಯ ಶತಕವನ್ನು ಬಾರಿಸಿದ ವಿರಾಟ್ ಕೊಹ್ಲಿಯವರನ್ನು ಶ್ಲಾಘಿಸಿದ ಪ್ರಧಾನಮಂತ್ರಿ


ವಿರಾಟ್ ಕೊಹ್ಲಿ ಅವರು 50 ಏಕದಿನ ಅಂತಾರಾಷ್ಟ್ರೀಯ ಶತಕಗಳನ್ನು ಗಳಿಸಿದ ಮೊದಲ ಕ್ರಿಕೆಟಿಗ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ಲಾಘಿಸಿದ್ದಾರೆ.

ಪ್ರಧಾನಮಂತ್ರಿಯವರು ತಮ್ಮ ಎಕ್ಸ್ ಖಾತೆಯಲ್ಲಿ ಈ ರೀತಿ ಸಂದೇಶ ತಿಳಿಸಿದ್ದಾರೆ:

“ಇಂದು, ವಿರಾಟ್ ಕೊಹ್ಲಿ ತಮ್ಮ  50ನೇ ಏಕದಿನ ಅಂತಾರಾಷ್ಟ್ರೀಯ ಶತಕವನ್ನು ಗಳಿಸಿದ್ದಾರೆ ಮಾತ್ರವಲ್ಲ, ಜೊತೆಗೆ ಅತ್ಯುತ್ತಮ ಕ್ರೀಡಾ ಮನೋಭಾವವನ್ನು ಅಭಿವ್ಯಕ್ತಿಸುವ ಶ್ರೇಷ್ಠತೆ ಮತ್ತು ಪರಿಶ್ರಮದ ಮನೋಭಾವವನ್ನು ಸಹ ಪ್ರದರ್ಶಿಸಿದ್ದಾರೆ.

ಸಾಧನೆಯ ಹಾದಿಯಲ್ಲಿ ಈ ಗಮನಾರ್ಹ ಮೈಲಿಗಲ್ಲು ಅವರ ನಿರಂತರ ಸಮರ್ಪಣೆ ಮತ್ತು ವಿಶೇಷ ಪ್ರತಿಭೆಗೆ ಸಾಕ್ಷಿಯಾಗಿದೆ.

ನಾನು ಅವರಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಅವರು ಮುಂದಿನ ಪೀಳಿಗೆಗೆ ಇದೇ ರೀತಿಯ ಕ್ರೀಡಾ ಸಾಧನೆಯ ಮಾನದಂಡಗಳನ್ನು ಸ್ಥಾಪಿಸುವುದನ್ನು ಮುಂದುವರಿಸಲಿ. ”

 

***