Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

69ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗೆ ಭಾಜನರಾದವರನ್ನು ಗೌರವಿಸಿ ಅಭಿನಂದಿಸಿದ ಪ್ರಧಾನಮಂತ್ರಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 69ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಸ್ವೀಕರಿಸಿ ಗೌರವಿಸಲ್ಪಟ್ಟ ಎಲ್ಲಾ ಗಣ್ಯರಿಗೂ ಅಭಿನಂದನೆ ಸಲ್ಲಿಸಿದ್ದಾರೆ. ದಾದಾಸಾಹೇಬ್ ಫಾಲ್ಕೆ ಜೀವಮಾನ ಸಾಧನೆ ಪ್ರಶಸ್ತಿಯನ್ನು ಸ್ವೀಕರಿಸಿ ಗೌರವಿತರಾದ ಶ್ರೀಮತಿ ವಹೀದಾ ರೆಹಮಾನ್ ಜಿ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು  ಈ ಸಂದರ್ಭದಲ್ಲಿ ವಿಶೇಷವಾಗಿ ಅಭಿನಂದಿಸಿದರು.

ಭಾರತದ ರಾಷ್ಟ್ರಪತಿಯವರ ಎಕ್ಸ್ ಖಾತೆಯ ಸಂದೇಶವನ್ನು ಹಂಚಿಕೊಂಡ ಪ್ರಧಾನಮಂತ್ರಿಯವರು, ಈ ರೀತಿ ಹೇಳಿದ್ದಾರೆ;

“69ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗೆ ಭಾಜನರಾದ ಎಲ್ಲರಿಗೂ ಅಭಿನಂದನೆಗಳು. ಪ್ರತಿಯೊಬ್ಬ ಪ್ರಶಸ್ತಿ ಪುರಸ್ಕೃತರು ಭಾರತೀಯ ಚಿತ್ರರಂಗಕ್ಕೆ ಅನುಕರಣೀಯ ಮಹತ್ತರ ಕೊಡುಗೆ ನೀಡಿದ್ದಾರೆ. ದಾದಾಸಾಹೇಬ್ ಫಾಲ್ಕೆ ಜೀವಮಾನ ಸಾಧನೆ ಪ್ರಶಸ್ತಿಯನ್ನು ಸ್ವೀಕರಿಸಿ ಗೌರವಪ್ರದಾನರಾದ ಶ್ರೀಮತಿ ವಹೀದಾ ರೆಹಮಾನ್ ಜಿ ಅವರನ್ನು ನಾನು ವಿಶೇಷವಾಗಿ ಅಭಿನಂದಿಸುತ್ತೇನೆ.”
 

***